ಶುಕ್ರವಾರ, ನವೆಂಬರ್ 15, 2019
22 °C

ನೀರು ಹಂಚಿಕೆ ವದಂತಿಗೆ ಕಿವಿಗೊಡಬೇಡಿ

Published:
Updated:

ಚಿಕ್ಕಬಳ್ಳಾಪುರ: ‘ಚಿಕ್ಕಬಳ್ಳಾಪುರ ಮತ್ತು ದೊಡ್ಡಬಳ್ಳಾಪುರ ನಗರಗಳಿಗೆ ಜಕ್ಕಲಮಡಗು ಜಲಾಶಯದ ನೀರು ಹಂಚಿಕೆ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗೆ ಸಾರ್ವಜನಿಕರು ಕಿವಿಗೊಡಬಾರದು’ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಮಾತನಾಡಿದ ಅವರು, ‘ಸರ್ಕಾರದ ಆದೇಶದಂತೆ ಜಕ್ಕಲಮಡಗು ಜಲಾಶಯದಿಂದ ಸಂಗ್ರಹವಾಗುವ ನೀರಿನಲ್ಲಿ ಶೇ 68.34 ರಷ್ಟು ನೀರನ್ನು ಚಿಕ್ಕಬಳ್ಳಾಪುರ ನಗರಕ್ಕೆ ಮತ್ತು ಶೇ 31.66 ರಷ್ಟು ನೀರನ್ನು ದೊಡ್ಡಬಳ್ಳಾಪುರ ನಗರಕ್ಕೆ ಒದಗಿಸಲಾಗುತ್ತಿದೆ’ ಎಂದು ಹೇಳಿದರು.

‘ಸಾಮಾಜಿಕ ಜಾಲತಾಣದಲ್ಲಿ ಅನಾಮಧೇಯ ವ್ಯಕ್ತಿಗಳು ಜಕ್ಕಲಮಡಗು ನೀರು ಹಂಚಿಕೆಯಲ್ಲಿ ಮಲತಾಯಿ ಧೋರಣೆ ಮಾಡಲಾಗುತ್ತಿದೆ ಎಂಬ ವದಂತಿ ಹಬ್ಬಿಸಿ ಸಾರ್ವಜನಿಕರಲ್ಲಿ ಗೊಂದಲ ಉಂಟು ಮಾಡುವವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದರು.

ಪ್ರತಿಕ್ರಿಯಿಸಿ (+)