ಬುಧವಾರ, ಸೆಪ್ಟೆಂಬರ್ 22, 2021
21 °C
ಬಿಜೆಪಿ ಕಾರ್ಯಕರ್ತರು, ಬೆಂಬಲಿಗರಿಂದ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮ

ಸುಧಾಕರ್‌ಗೆ ಸಚಿವ ಸ್ಥಾನ; ಸಂತಸ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಅತ್ತ ಡಾ.ಕೆ.ಸುಧಾಕರ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಬೆಂಬಲಿಗರು ಬಲಮುರಿ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು. ಸುಧಾಕರ್ ಹಾಗೂ ಬಿಜೆಪಿ ಪರವಾಗಿ ಘೋಷಣೆಗಳು ಮೊಳಗಿದವು. ವಿವಿಧ ಘಟಕಗಳ ಪದಾಧಿಕಾರಿಗಳು ಹಾಗೂ ಮಹಿಳಾ ಕಾರ್ಯಕರ್ತರು ಸಂಭ್ರಮಿಸಿದರು.

ಮಧ್ಯಾಹ್ನ 2 ಗಂಟೆಯಲ್ಲಿ ಬಲಮುರಿ ವೃತ್ತದಲ್ಲಿ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದರು. ಸುಧಾಕರ್ ಅಣ್ಣ ಸೂಪರ್ ಸಾರ್, ಬಿಜೆಪಿ ಜಿಂದಾಬಾದ್, ಬಸವರಾಜ ಬೊಮ್ಮಾಯಿ ಅವರಿಗೆ ಜೈ ಎಂದು ಘೋಷಣೆಗಳನ್ನು ಕೂಗಿದರು. ಪರಸ್ಪರ ಸಿಹಿ ತಿನ್ನಿಸಿ ಖುಷಿ ಹಂಚಿಕೊಂಡರು.

ಸುಧಾಕರ್ ಅವರಿಗೆ ಸಚಿವ ಸ್ಥಾನ ನೀಡಿದ್ದಕ್ಕೆ ಬಿಜೆಪಿ ಮುಖಂಡರಿಗೆ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಚಿಕ್ಕಬಳ್ಳಾಪುರ ಜನರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಮುಖಂಡರು ನುಡಿದರು.

ಮುಖಂಡರಾದ ಅಪ‍್ಪಾಲು ಮಂಜುನಾಥ್, ಬಿ.ವಿ.ಆನಂದ್, ಶ್ರೀನಿವಾಸ್, ರಣಜಿತ್ ಕುಮಾರ್, ಲಕ್ಷ್ಮಿನಾರಾಯಣ ಗುಪ್ತ, ಪ್ರೇಮಲೀಲಾ ವೆಂಕಟೇಶ್, ಕಲಾವತಿ ನಾಗರಾಜ್, ಮೊಬೈಲ್ ಬಾಬು, ಲಕ್ಷ್ಮಿಪತಿ, ಅಭಿಷೇಕ ಗೌಡ, ಸದಾಶಿವ ಇತರರು ಇದ್ದರು.

ಬೆಂಗಳೂರಿನಲ್ಲಿ ಮುಖಂಡರು: ನಗರಸಭೆ ಅಧ್ಯಕ್ಷ ಆನಂದರೆಡ್ಡಿ ಬಾಬು, ನಗರಸಭೆ ಸದಸ್ಯರು ಹಾಗೂ ಕೆಲವು ಮುಖಂಡರು ಬೆಳಿಗ್ಗೆ 10.30ರ ವೇಳೆಗೆ ನಗರದ ಶನೈಶ್ಚರ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಮಾಣ ವಚನ ಸಮಾರಂಭಕ್ಕೆ ತೆರಳಿದರು. ಆಗಲೂ ಸುಧಾಕರ್ ಅವರ ಪರವಾಗಿ ಘೋಷಣೆಗಳು ಮೊಳಗಿದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.