ಚಿಂತಾಮಣಿ:ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಗುರುವಾರ ನಗರದ ಝಾನ್ಸಿ ಕ್ರೀಡಾಂಗಣದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದ ಉದ್ಘಾಟನೆ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ತಹಶೀಲ್ದಾರ್ ಹನುಮಂತರಾಯಪ್ಪ,ದೈಹಿಕ ಆರೋಗ್ಯವು ಮಾನಸಿಕ ಆರೋಗ್ಯಕ್ಕೆ ಪೂರಕವಾಗಿರುತ್ತದೆ. ಆರೋಗ್ಯವಾದ ಶರೀರದಲ್ಲಿ ಆರೋಗ್ಯಕರವಾದ ಮನಸ್ಸಿರುತ್ತದೆ ಎಂದು ಪ್ರತಿಪಾದಿಸಿದರು.

ಕ್ರೀಡೆಗಳು ವಿದ್ಯಾಭ್ಯಾಸದ ಒಂದು ಅಂಗವಾಗಿದೆ. ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಆರೋಗ್ಯ ಚೆನ್ನಾಗಿರುತ್ತದೆ. ದೈಹಿಕ ಆರೋಗ್ಯ ಚೆನ್ನಾಗಿರುವವರಿಗೆ ಮಾನಸಿಕ ಏಕಾಗ್ರತೆ ಹಾಗೂ ಆರೋಗ್ಯ ಲಭಿಸುತ್ತದೆ.

ಶಿಕ್ಷಣ ಕ್ಷೇತ್ರದಲ್ಲಿ ಪಠ್ಯ ಚಟುವಟಿಕೆಗಳಿಗೆ ನೀಡುವ ಆದ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕು. ಕ್ರೀಡಾಪಟುಗಳು ಸೋಲು-ಗೆಲುವಿಗಿಂತ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ತಾಲ್ಲುಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್ ಮಾತನಾಡಿ, ಕ್ರೀಡೆಗಳಲ್ಲಿ ಸೋಲು-ಗೆಲುವಿಗಿತ ಭಾಗವಹಿಸುವುದು ಮುಖ್ಯ ಎಂದರು.

ಭಾಗವಹಿಸದವರೆಲ್ಲ ಗೆಲ್ಲಲು ಸಾಧ್ಯವಿಲ್ಲ. ಸೋಲು-ಗೆಲುವನ್ನು ಕ್ರೀಡಾ ಮನೋಭಾವದಿಂದ ಸ್ವೀಕರಿಸಬೇಕು. ಸೋಲು ಗೆಲುವಿನ ಸೋಪಾನ. ಶ್ರಮವಹಿಸಿ ಸತತ ಅಭ್ಯಾಸ ಮಾಡಿದರೆ ಜಯ ದೊರೆಯುತ್ತದೆ. ವಿದ್ಯಾರ್ಥಿಗಳು ಒಂದಲ್ಲ ಒಂದು ಕ್ರೀಡೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಹೋಬಳಿ ಹಂತದ ಕ್ರೀಡಾಕೂಟದಲ್ಲಿ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕ್ರೀಡಾಪಟುಗಳು ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದರು.

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಅಶೋಕ ಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಕೆ.ರವಣಪ್ಪ ಮಾತನಾಡಿದರು.

ಕ್ಷೇತ್ರ ಶಢಿಕ್ಷಣಾಧಿಕಾರಿ ವೆಂಕಟೇಶಪ್ಪ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಜನಾರ್ಧನರೆಡ್ಡಿ, ದೈಹಿಕ ಶಿಕ್ಷಣ ಪರಿವೀಕ್ಷಕ ಜಿ.ಸುಂದರೇಶ್, ಇ.ಸಿ.ಒ ಎಆಜಣ್ಣ, ಪ್ರೌಏಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಂಜುನಾಥ್, ಐಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಎಸ್.ಫಕೃಸಾಬಿ, ಕೆ.ಎ.ಮಂಜುನಾಥ್, ಜಿ.ನರಸಿಂಹಪ್ಪ, ಶ್ರೀರಾಮರೆಡ್ಡಿ ಹಾಗೂ ದೈಹಿಕ ಶಿಕ್ಷಕರು
ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.