ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತರಬೇತಿ ಕಾರ್ಯಗಾರಕ್ಕೆ ಚಾಲನೆ

Last Updated 21 ಏಪ್ರಿಲ್ 2020, 15:49 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ:‘ಪ್ರತಿ ತಾಲ್ಲೂಕಿನಲ್ಲಿ ಸ್ವಸಹಾಯ ಸಂಘಗಳು ಮುಖಗವಸು ತಯಾರು ಮಾಡುವ ಮೂಲಕ ಕೊರೊನಾ ತಡೆಗಟ್ಟಲು ಬೆನ್ನೆಲುಬಾಗಿ ಕಾರ್ಯನಿರ್ವಹಿಸುತ್ತಿರುವುದು ಶಾಘ್ಲನೀಯ‘ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಹಿಳಾ ಸ್ವಸಹಾಯ ಗುಂಪುಗಳು ಹಾಗೂ ಸ್ತ್ರೀ ಶಕ್ತಿ ಗುಂಪುಗಳಿಗೆ ಮುಖಗವಸು (ಮಾಸ್ಕ್) ಹಾಗೂ ಪೆನಾಯಿಲ್ ತಯಾರಿಕೆ ಮಾಡುವ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

’ಈ ತರಬೇತಿ ನಿಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಿಮ್ಮ ಬದುಕು ಕಟ್ಟಿಕೊಳ್ಳಬೇಕು. ಪೆನಾಯಿಲ್ ತಯಾರಿಕೆಯಲ್ಲಿ ಗುಣಮಟ್ಟ ಕಾಪಾಡಿಕೊಳ್ಳಬೇಕು. ಅದಕ್ಕೆ ನಮ್ಮ ಗ್ರಾಮ ಪಂಚಾಯಿತಿಗಳಿಗೆ ಹಾಗೂ ತಾಲ್ಲೂಕು ಪಂಚಾಯಿತಿಗಳು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುತ್ತದೆ‘ ಎಂದು ತಿಳಿಸಿದರು.

’ಇಲ್ಲಿ ತರಬೇತಿ ಪಡೆದುಕೊಂಡ ತರಬೇತಿದಾರರು ನಿಮ್ಮ ತಾಲ್ಲೂಕು ಮತ್ತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅಂತರ ಕಾಯ್ದುಕೊಂಡು ತರಬೇತಿ ನೀಡಬೇಕು‘ ಎಂದು ಹೇಳಿದರು.

ಜಿಲ್ಲಾ ಪಂಚಾಯತ್ ಯೋಜನಾಧಿಕಾರಿ ಗಿರಿಜಾ ಶಂಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT