ಶನಿವಾರ, ಡಿಸೆಂಬರ್ 7, 2019
21 °C

ಕೇಂದ್ರ ಸಚಿವರಿಂದ ಬರ ಅಧ್ಯಯನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಕೇಂದ್ರ ಗ್ರಾಮೀಣಾಭಿವೃದ್ಧಿ, ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ರಾಜ್ಯ ಸಚಿವ ರಮೇಶ್ ಜಿಗಜಿಣಗಿ ಅವರ ನೇತೃತ್ವದ ಬಿಜೆಪಿ ಮುಖಂಡರ ತಂಡ ಸೋಮವಾರ ತಾಲ್ಲೂಕಿನ ಹೂವಿನವಾರಹಳ್ಳಿಯಲ್ಲಿ ಬರ ಅಧ್ಯಯನ ನಡೆಸಿತು.

ಈ ವೇಳೆ ಮಾತನಾಡಿದ ಜಿಗಜಿಣಗಿ, 'ರಾಜ್ಯ ಸರ್ಕಾರ ಬರ ಪರಿಹಾರಕ್ಕೆ ಕ್ರಮಕೈಗೊಂಡಿಲ್ಲ. ಆಂತರಿಕ ಕಚ್ಚಾಟದಲ್ಲೇ ದಿನ ಉರುಳುತ್ತಿವೆ. ರೈತರ ನೋವಿಗೆ ಸ್ಪಂದಿಸುವ ಕೆಲಸ ಮಾಡುತ್ತಿಲ್ಲ' ಎಂದು ಹೇಳಿದರು.

'ಬಿಜೆಪಿಯವರದು ರಾಜಕೀಯ ಪ್ರೇರಿತ ಅಧ್ಯಯನ ಎಂಬ ಕೃಷಿ ಸಚಿವರ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದೆ. ರೈತರ ಸಮಸ್ಯೆಗಳ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ನೀಡುವುದು ನಮ್ಮ ಜವಾಬ್ದಾರಿ' ಎಂದು ತಿಳಿಸಿದರು. ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ, ಮಾಜಿ ಶಾಸಕ ಬಿ.ಸುರೇಶ್ ಗೌಡ ಅಧ್ಯಯನ ತಂಡದಲ್ಲಿ ಇದ್ದಾರೆ.

ಪ್ರತಿಕ್ರಿಯಿಸಿ (+)