ಶಿಡ್ಲಘಟ್ಟ: ಈಚೆಗೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ವಾಹನ ಸವಾರರು ಜೀವ ಭದ್ರತೆ ಹಿತದೃಷ್ಟಿಯಿಂದ ದಾಖಲೆಗಳನ್ನು ಕ್ರಮಬದ್ಧವಾಗಿ ಇಟ್ಟುಕೊಳ್ಳಲು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಲಾಗುತ್ತಿದೆ ಎಂದು ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಮುರಳೀಧರ್ ಹೇಳಿದರು.

ನಗರದಲ್ಲಿ ಗುರುವಾರ ವಾಹನ ತಪಾಸಣೆ ನಡೆಸಿದ ನಂತರ ಮಾತನಾಡಿದರು. ನಗರದ ವ್ಯಾಪ್ತಿಯಲ್ಲಿ ಸಂಚರಿಸುವ ಬಹುತೇಕ ಆಟೊಗಳಿಗೆ ವಿಮೆ ಇರುವುದಿಲ್ಲ. ಕೆಲವೊಂದು ದಾಖಲೆ ಇಲ್ಲ ಎಂಬ ದೂರುಗಳು ಕೇಳಿ ಬಂದಿವೆ. ವಿಮೆ ಸೌಲಭ್ಯ ಮಾಡಿಕೊಂಡು ದಾಖಲೆ ಕ್ರಮಬದ್ಧವಾಗಿ ಇಟ್ಟುಕೊಂಡು ಸಂಚರಿಸಬೇಕು ಎಂದರು.

ಸಂಚಾರ ನಿಯಮ ಪಾಲನೆ ಎಲ್ಲರ ಕರ್ತವ್ಯವಾಗಬೇಕು. ಇದು ಜನರ ಹಿತಕ್ಕಾಗಿ ಮಾಡುತ್ತಿರುವ ಕಾರ್ಯ. ಜನರೇ ಎಚ್ಚೆತ್ತುಕೊಂಡು ಅಮೂಲ್ಯ ಜೀವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಚಿಂತಿಸಬೇಕು. ವಾಹನಗಳ ದಾಖಲೆ ಕ್ರಮಬದ್ಧವಾಗಿ ಇಟ್ಟುಕೊಂಡು ಸಂಚಾರ ಮಾಡಿದರೆ ಎಲ್ಲರಿಗೂ ಕ್ಷೇಮ ಎಂದು ಮನವರಿಕೆ ಮಾಡಿಕೊಟ್ಟರು.

ಸರ್ಕಲ್ ಇನ್‌ಸ್ಪೆಕ್ಟರ್ ಶ್ರೀನಿವಾಸ್, ನಗರ ಪೊಲೀಸ್ ಠಾಣೆ ಸಬ್ ಇನ್‌ಸ್ಪೆಕ್ಟರ್ ವೇಣುಗೋಪಾಲ್ ಮತ್ತು ಸಿಬ್ಬಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.