ಸೋಮವಾರ, ಮಾರ್ಚ್ 27, 2023
32 °C

ಚಿಕ್ಕಬಳ್ಳಾಪುರದಲ್ಲಿ ಬುಧವಾರ ಬೆಳಗಿನ ಜಾವ ಮತ್ತೆ ಭೂಕಂಪನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

PV Photo

ಚಿಕ್ಕಬಳ್ಳಾಪುರ: ತಾಲ್ಲೂಕಿನ ಅಡ್ಡಗಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೋಗಪರ್ತಿ ಮತ್ತು ಗೊಲ್ಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ಬೀರಗಾನಹಳ್ಳಿಯಲ್ಲಿ ಬುಧವಾರ ಬೆಳಗಿನ ಜಾವ 3.16ರ ಸುಮಾರಿನಲ್ಲಿ ಲಘು ಭೂಕಂಪನ ಸಂಭವಿಸಿದೆ.

ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 2.6ರಷ್ಟು ದಾಖಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

ಕಳೆದ ವರ್ಷ ಡಿ. 21 ಮತ್ತು 23ರಂದು ಈ ಗ್ರಾಮಗಳೂ ಸೇರಿದಂತೆ ಸುತ್ತಲಿನ ಹಲವು ಗ್ರಾಮಗಳಲ್ಲಿ 3.6 ಮತ್ತು 3.3 ರಷ್ಟು ತೀವ್ರತೆಯ  ಭೂಕಂಪನ ಸಂಭವಿಸಿತ್ತು. 30ಕ್ಕೂ ಹೆಚ್ಚು ಮನೆಗಳಲ್ಲಿ ಬಿರುಕು ಮೂಡಿತ್ತು.

ಭೂ ವಿಜ್ಞಾನಿಗಳು ಭೇಟಿ ನೀಡಿ ಅಂತರ್ಜಲ ತೀವ್ರವಾಗಿ ಕುಸಿದಿದ್ದ ಈ ಭಾಗದಲ್ಲಿ ಗರಿಷ್ಠ ಪ್ರಮಾಣದ ಮಳೆ ಆಗಿದೆ. ಅಂತರ್ಜಲ ಮರು ಪೂರಣ ಆಗುವ ಸಂದರ್ಭದಲ್ಲಿ ಈ ರೀತಿಯಲ್ಲಿ ಭೂಮಿಯಲ್ಲಿ ಸದ್ದು ಕೇಳಿ ಬರುತ್ತದೆ. ಈ ಪ್ರದೇಶ ಭೂಕಂಪನದ ವಲಯದಲ್ಲಿ ಇಲ್ಲ ಎಂದಿದ್ದರು. ಹೀಗಿದ್ದರೂ ಜನರು ತೀವ್ರವಾಗಿ ಆತಂಕಗೊಂಡಿದ್ದರು.

ಈಗ ಮತ್ತೆ ಇದೇ ವಲಯದಲ್ಲಿ ಭೂಕಂಪನ ಸಂಭವಿಸಿದ್ದು, ಜನರನ್ನು ಆತಂಕಕ್ಕೆ ದೂಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು