ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪಾರದರ್ಶಕತೆಯಿಂದ ಹಕ್ಕು ಚಲಾಯಿಸಿ’

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಬಿ. ಫೌಜಿಯಾ ತರನ್ನುಮ್ ಸೂಚನೆ
Last Updated 27 ನವೆಂಬರ್ 2019, 6:03 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಮತದಾರರು ಯಾವುದೇ ಪಕ್ಷದ ಪಕ್ಷಪಾತಕ್ಕೊಳಗಾಗದೇ ನಿಷ್ಪಕ್ಷಪಾತವಾಗಿ ಹಾಗೂ ಪಾರದರ್ಶಕತೆಯಿಂದ ಮತ ಚಲಾಯಿಸಬೇಕು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರಾದ ಬಿ. ಫೌಜಿಯಾ ತರನ್ನುಮ್ ಅವರು ಹೇಳಿದರು.

ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ಉಪಚುನಾವಣೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಹಾಗೂ ತಾಲ್ಲೂಕು ಸ್ವೀಪ್ ಪ್ರಚಾರ ಸಮಿತಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಆಯೋಜಿಸಿದ್ದ ವಿಕಲಚೇತನರ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಅಧಿಕಾರಕ್ಕೆ ತರುವ ಹಾಗೂ ಅಧಿಕಾರದಿಂದ ಕೆಳಗಿಳಿಸುವ ಹಕ್ಕಿರುತ್ತದೆ. ಕಡ್ಡಾಯ ಮತದಾನಗಿಂತ ನೈತಿಕ ಮತದಾನಕ್ಕೆ ಮತದಾರರು ಹೆಚ್ಚಿನ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ನಾಗರೀಕರಿಗೆ ಮತದಾನದ ಬಗ್ಗೆ ಅರಿವು ಮೂಡಿಸಬೇಕು ಎಂದು ಮನವಿ ಮಾಡಿದರು.

ಮತದಾನದ ದಿನ ದೈಹಿಕ ವಿಕಲಚೇತನರಿಗೆ ವೀಲ್‌ ಚೇರ್ ವ್ಯವಸ್ಥೆ, ದುಷ್ಟಿದೋಷ ಇರುವವರಿಗೆ ವಾಲೆಂಟರಿಗಳ ಸಹಾಯ ಹಾಗೂ ವಿಕಲಚೇತನರಿಗೆ ಪ್ರತ್ಯೇಕ ದ್ವಾರಗಳನ್ನು ತೆಗೆಯಲಾಗುತ್ತದೆ. ಹೀಗಾಗಿ ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದರು.

ಇದೇ ವೇಳೆ ಸೆಕ್ಟರ್ ಅಧಿಕಾರಿ ಶಂಕರಪ್ಪ ನವರು ವಿಶೇಷ ವಿಕಲಚೇತನರಿಗೆ ಇವಿಎಂ ಹಾಗೂ ವಿವಿಪ್ಯಾಟ್ ಮತ ಯಂತ್ರಗಳ ಬಳಕೆಯ ಬಗ್ಗೆ ವಿಶೇಷ ತರಬೇತಿಯನ್ನು ನೀಡಿದರು.

ದ್ವಿಚಕ್ರ ವಾಹನಗಳ ರ್ಯಾಲಿಯಲ್ಲಿ ಅಪರ ಜಿಲ್ಲಾಧಿಕಾರಿ ಆರತಿ ಆನಂದ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರಾಜೇಂದ್ರ, ಜಿಲ್ಲಾ ಉದ್ಯೋಗಾಧಿಕಾರಿ ಎಂ.ಪ್ರಸಾದ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಜಿ.ಕೆ. ಲಕ್ಷ್ಮೀದೇವಮ್ಮ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲತಾ ರವರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT