ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ನಗರಸಭೆಗೆ ಫೆಬ್ರವರಿ 9 ರಂದು ಚುನಾವಣೆ

ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ
Last Updated 14 ಜನವರಿ 2020, 14:42 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಅವಧಿ ಮುಕ್ತಾಯವಾದ ಮತ್ತು ನ್ಯಾಯಾಲಯದಲ್ಲಿದ್ದ ಪ್ರಕರಣ ಇತ್ಯರ್ಥಗೊಂಡ ಚಿಕ್ಕಬಳ್ಳಾಪುರ ನಗರಸಭೆಗೆ ರಾಜ್ಯ ಚುನಾವಣಾ ಆಯೋಗವು ಫೆಬ್ರುವರಿ 9 ರಂದು ಚುನಾವಣೆ ನಿಗದಿ ಮಾಡಿ, ಮಂಗಳವಾರ ವೇಳಾಪಟಿ ಹೊರಡಿಸಿದೆ. ವೇಳಾಪಟ್ಟಿ ಪ್ರಕಟವಾದ ಬೆನ್ನಲ್ಲೇ ಚುನಾವಣೆ ನೀತಿ ಸಂಹಿತೆ ಜಾರಿಗೆ ಬಂದಿದೆ.

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಅವರು ಜನವರಿ 21 ರಂದು ಅಧಿಸೂಚನೆ ಹೊರಡಿಸಲಿದ್ದಾರೆ. ಜನವರಿ 28 ನಾಮಪತ್ರ ಸಲ್ಲಿಸಲು ಕೊನೆಯ ದಿನ. ಜ.29 ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ಜನವರಿ 31 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಫೆಬ್ರವರಿ9 ರಂದು ಬೆಳಿಗ್ಗೆ 7 ರಿಂದ ಸಂಜೆ 5ರ ವರೆಗೆ ಮತದಾನ ನಡೆಯಲಿದೆ. ಮರು ಮತದಾನದ ಅಗತ್ಯ ಬಿದ್ದರೆ ಫೆಬ್ರವರಿ 10 ರಂದು ನಡೆಸಬೇಕಾಗುತ್ತದೆ. 11 ರಂದು ತಾಲ್ಲೂಕು ಕೇಂದ್ರದಲ್ಲಿ ಬೆಳಿಗ್ಗೆ 8 ರಿಂದ ಮತ ಎಣಿಕೆ ಕಾರ್ಯ ನಡೆದು ಫಲಿತಾಂಶ ಘೋಷಣೆಯಾಗುವ ಜತೆಗೆ ಚುನಾವಣೆ ನೀತಿ ಸಂಹಿತೆ ಮುಕ್ತಾಯವಾಗಲಿದೆ.

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆಯನ್ನು ಹೈಕೋರ್ಟ್ ಆದೇಶದಂತೆ ಕಳೆದ ನವೆಂಬರ್ 14 ರಂದು ನಡೆಸಬೇಕಿತ್ತು. ಆದರೆ ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆ ಕಾರಣಕ್ಕೆ ಮುಂದೂಡಲಾಗಿತ್ತು. ಇತ್ತೀಚೆಗಷ್ಟೇ ಆಯೋಗವು ಜಿಲ್ಲಾಧಿಕಾರಿ ಅವರಿಗೆ ನಗರಸಭೆ ಚುನಾವಣೆ ನಡೆಸಲು ಅಗತ್ಯವಾದ ಸಿದ್ಧತೆ ಮಾಡಿಕೊಳ್ಳುವಂತೆ ಆದೇಶಿಸಿತ್ತು.

ರಾಜ್ಯ ಚುನಾವಣಾ ಆಯೋಗ ನಗರಸಭೆ ಚುನಾವಣೆ ವೇಳಾಪಟ್ಟಿ ಪ್ರಕಟಿಸುತ್ತಿದ್ದಂತೆ ನಗರದಲ್ಲಿ ಸಂಚಲನ ಮೂಡಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಮುಖಂಡರು ಚುನಾವಣೆಗಾಗಿ ತಮ್ಮ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ತೊಡಗಿಸಿಕೊಂಡಿದ್ದು, ಆಕಾಂಕ್ಷಿಗಳ ದಂಡು ನಾಯಕರ ಮನೆಗೆ ಅಲೆದಾಟ ಶುರು ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ವೇಳಾಪಟ್ಟಿ

ಜನವರಿ 21– ಅಧಿಸೂಚನೆ ಪ್ರಕಟ

ಜನವರಿ 28– ನಾಮಪತ್ರ ಸಲ್ಲಿಸಲು ಕೊನೆಯ ದಿನ

ಜನವರಿ 29–ನಾಮಪತ್ರ ಪರಿಶೀಲನೆ

ಜನವರಿ 31–ನಾಮಪತ್ರ ಹಿಂಪಡೆಯಲು ಕೊನೆಯ ದಿನ

ಫೆಬ್ರವರಿ 9– ಮತದಾನ

ಫೆಬ್ರವರಿ 11– ಮತ ಎಣಿಕೆ, ಫಲಿತಾಂಶ ಪ್ರಕಟ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT