ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರಂಗ ಶಿಕ್ಷಣಕ್ಕೆ ಮಹತ್ವ ನೀಡಿ: ನಿರ್ಮಲಾನಂದನಾಥ ಸ್ವಾಮೀಜಿ ಸಲಹೆ

ಆದಿಚುಂಚನಗಿರಿ ಮಠ
Last Updated 24 ಜನವರಿ 2021, 6:59 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ನಗರದ ಹೊರವಲಯದ ಅಗಲಗುರ್ಕಿ ಬಿಜಿಎಸ್‌ ಸೈನ್ಸ್ ಅಕಾಡೆಮಿಯಲ್ಲಿ ವಿದ್ಯಾರ್ಥಿಗಳಿಗೆ ಶನಿವಾರ ಪದವಿ ಪ್ರದಾನ ಸಮಾರಂಭ ನಡೆಯಿತು.

ಸಮಾರಂಭದಲ್ಲಿ 2019-20ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ಅಂತಿಮ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ 2020ರ ಏಪ್ರಿಲ್ ತಿಂಗಳಿನಲ್ಲಿ ಆಚರಿಸಬೇಕಾಗಿತ್ತು. ಆದರೆ ಕೋವಿಡ್-19ರ ಕಾರಣದಿಂದಾಗಿ ಸಮಾರಂಭವನ್ನು ಶನಿವಾರ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಬಿಜಿಎಸ್ ಸಂಸ್ಥೆಯ ವಿವಿಧ ಕಾಲೇಜುಗಳಾದ ಬಿಜಿಎಸ್ ಸೈನ್ಸ್ ಅಕಾಡೆಮಿ ಅಗಲಗುರ್ಕಿ, ಚಿಕ್ಕಬಳ್ಳಾಪುರ, ಬಿಜಿಎಸ್ ಮ್ಯಾನೇಜ್‍ಮೆಂಟ್ ಸ್ಟಡೀಸ್, ಚಿಕ್ಕಬಳ್ಳಾಪುರ, ಬಿಜಿಎಸ್ ಬಿ.ಪಿಎಡ್ ಕಾಲೇಜು, ಚಿಕ್ಕಬಳ್ಳಾಪುರ, ಬಿಜಿಎಸ್ ಸ್ಕೂಲ್ ಆಫ್ ಬಿಜಿನೆಸ್ ಮ್ಯಾನೇಜ್‍ಮೆಂಟ್ ಶ್ರೀನಿವಾಸಪುರ ಮತ್ತು ಬಿಜಿಎಸ್ ಕಾಲೇಜ್ ಆಫ್ ಕಾಮರ್ಸ್ ಮಾಲೂರು ಈ ಕಾಲೇಜುಗಳಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ‘ವಿದ್ಯಾರ್ಥಿಗಳು ತಮ್ಮ ಕಲಿಕಾ ಹಂತದಲ್ಲಿ ಬಾಹ್ಯ ಶಿಕ್ಷಣಕ್ಕಿಂತ ಅಂತರಂಗ ಶಿಕ್ಷಣದ ಕಡೆಗೆ ಹೆಚ್ಚಿನ ಗಮನ ಹರಿಸಬೇಕಾಗಿದೆ. ಇದರಿಂದ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ‌ಸಹಕಾರಿಯಾಗುತ್ತದೆ’ ಎಂದು ಹೇಳಿದರು.

ಆದಿಚುಂಚನಗಿರಿ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಚಂದ್ರಶೇಖರ ಶೆಟ್ಟಿ ಮಾತನಾಡಿ, ಶಿಕ್ಷಣದ ಮಹತ್ವ ಹಾಗೂ ಅದರ ಕಠಿಣ ಹಾದಿಯನ್ನು ಹೇಗೆ ನಿಭಾಯಿಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್ ರವರ ಆಪ್ತ ಕಾರ್ಯದರ್ಶಿ ಪಿ.ಪ್ರದೀಪ್ ಮಾತನಾಡಿ, ಭಾರತೀಯ ವಿದ್ಯಾಸಂಸ್ಥೆಗಳ ಸಂಸ್ಕೃತಿ ಹಾಗೂ ಅದರ ಗುಣಮಟ್ಟ ಬೆಳೆಯಬೇಕಾದರೆ ವಿದ್ಯಾರ್ಥಿಗಳ ಕೊಡುಗೆ ಮುಖ್ಯ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಆಕ್ಸ್‌ಫರ್ಡ್ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ. ಜಿ.ಟಿ. ರಾಜು, ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ, ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ, ಬಿಜಿಎಸ್ ಪಿಯು ಕಾಲೇಜು ಮುಖ್ಯಸ್ಥ ಡಾ.ಎನ್.ಮಧುಸೂಧನ್, ಪ್ರಾಂಶುಪಾಲ ಎಚ್.ಬಿ.ರಮೇಶ್, ಡಾ.ವೆಂಕಟೇಶ್‍ಬಾಬು, ಶಿವಶಂಕರ್, ಗಂಗಾಧರ ಗೌಡ ಮತ್ತು ಶ್ರೀಧರ್ ಮೂರ್ತಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT