ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕನ್ನಡ ಸಾಹಿತ್ಯ ಉಳಿಸಲು ಒತ್ತು‘

Last Updated 21 ಡಿಸೆಂಬರ್ 2020, 4:17 IST
ಅಕ್ಷರ ಗಾತ್ರ

ಬಾಗೇಪಲ್ಲಿ: ‘ಕನ್ನಡ ನಾಡು, ನುಡಿ, ಸಾಹಿತ್ಯ ಕ್ಷೇತ್ರವನ್ನು ಮತ್ತಷ್ಟು ಉಳಿಸಿ, ಬೆಳೆಸಲು ಕಸಾಪ ಸದಸ್ಯರು ತಮಗೆ ಅವಕಾಶ ನೀಡಬೇಕು’ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಸ್ಥಾನದ ಆಕಾಂಕ್ಷಿ ಮಹೇಶ್ ಜೋಶಿ ಮನವಿ ಮಾಡಿದರು.

ತಾಲ್ಲೂಕಿನ ಐತಿಹಾಸಿಕ ದೇವರಗುಡಿಪಲ್ಲಿ(ಗಡಿದಂ)ಯ ಗಾಯಿತ್ರಿ ಮಂದಿರದ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸೌಹಾರ್ದ ಭೇಟಿ ಸಭೆಯಲ್ಲಿ ಅವರು ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್‌ನ ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದೇನೆ. ನಾಡಿನ ಉದ್ದಗಲಕ್ಕೂ ಸಂಚರಿಸಿ ಕಸಾಪ ಸದಸ್ಯರ ಬಳಿ ಮತಯಾಚನೆ ಮಾಡುತ್ತಿದ್ದೇನೆ. ಆಯ್ಕೆ ಮಾಡಿದರೆ ಬಾಗೇಪಲ್ಲಿಯನ್ನು ಭಾಗ್ಯನಗರ ಮಾಡುವಂತೆ ರಾಜ್ಯ ಸರ್ಕಾರ‌ಕ್ಕೆ ಶಿಫಾರಸು ಮಾಡಲಾಗುವುದು ಎಂದರು.

ಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಹನುಮಂತರಾವ್, ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಅಮೃತ್ ಕುಮಾರ್, ತಾಲ್ಲೂಕು ಅಧ್ಯಕ್ಷ ಎ.ಜಿ. ಸುಧಾಕರ್, ಪ್ರಧಾನ ಕಾರ್ಯದರ್ಶಿ ಡಿ.ಎನ್. ಕೃಷ್ಣಾರೆಡ್ಡಿ, ಉಪಾಧ್ಯಕ್ಷ ಎಸ್. ಮುನಿರಾಮಯ್ಯ, ತಾಲ್ಲೂಕು ಸಂಚಾಲಕ ಶ್ರೀನಿವಾಸ್ ಸೇರಿದಂತೆ ಕಸಾಪ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT