ಮಂಗಳವಾರ, ಏಪ್ರಿಲ್ 7, 2020
19 °C
ಜೀವನಾವಶ್ಯಕ ವಸ್ತುಗಳ ಮಾರಾಟ ಮಳಿಗೆಗಳ ಎದುರು ವೃತ್ತ, ಚೌಕಗಳು ಗೋಚರ

ಕೋವಿಡ್‌-19 ಹಿನ್ನೆಲೆ: ಚಿಕ್ಕಬಳ್ಳಾಪುರ ನಗರದಲ್ಲಿ ಸಾಮಾಜಿಕ ಅಂತರಕ್ಕೆ ಒತ್ತು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಕೊರೊನಾ ವೈರಸ್‌ ಸೋಂಕು ಹರಡುವುದು ತಡೆಗಟ್ಟುವ ನಿಟ್ಟಿನಲ್ಲಿ ನಗರಸಭೆ ಮತ್ತು ಪೊಲೀಸ್‌ ಇಲಾಖೆ ನಗರದಲ್ಲಿ ಸಾಮಾಜಿಕ ಅಂತರಕ್ಕೆ ಒತ್ತು ನೀಡುವ ಜತೆಗೆ ಈ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸುತ್ತಿವೆ.

ಕರ್ಪ್ಯೂ ಮಾದರಿಯ ನಿರ್ಬಂಧ ಹೇರಿರುವ ಮೂರು ವಾರಗಳ ಲಾಕ್‌ಡೌನ್‌ನಿಂದಾಗಿ ನಗರದ ಬಹುತೇಕ ವಾಣಿಜ್ಯ ಚಟುವಟಿಕೆಗಳು ಸ್ತಬ್ಧಗೊಂಡಿದ್ದು, ಬಾಗಿಲು ತೆರೆದಿರುವ ಜೀವನಾವಶ್ಯಕ ವಸ್ತುಗಳ ಮಳಿಗೆಗಳ ಎದುರು ಇದೀಗ ಬಿಳಿ ಬಣ್ಣದ ವೃತ್ತ, ಚೌಕಗಳು ಗೋಚರಿಸುತ್ತಿವೆ.

ಕೊರೊನಾ ಅಪಾಯಕಾರಿ ಸಾಂಕ್ರಾಮಿಕ ಸೋಂಕು ಆಗಿರುವ ಕಾರಣ ಜನರಿಗೆ ಆರೋಗ್ಯ ಇಲಾಖೆ ವ್ಯಕ್ತಿಯಿಂದ ವ್ಯಕ್ತಿಯ ನಡುವೆ ಕನಿಷ್ಠ ಒಂದು ಮೀಟರ್‌ ಅಂತರ ಕಾಯ್ದುಕೊಳ್ಳುವಂತೆ ಸೂಚನೆ ನೀಡಿದೆ. ಹೀಗಾಗಿ, ನಗರದ ಮಳಿಗೆಗಳ ಎದುರು ಗ್ರಾಹಕರು ಅಂತರ ಕಾಯ್ದುಕೊಂಡು ನಿಂತು ಖರೀದಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ.

ಸಾಕಷ್ಟು ಗ್ರಾಹಕರಿಗೆ ಈ ಬಗ್ಗೆ ಅರಿವಿಲ್ಲದೆ ನೇರವಾಗಿ ಮಳಿಗೆಗಳಿಗೆ ಹೋಗುತ್ತಿದ್ದು, ಅಂತಹವರಿಗೆ ವರ್ತಕರು ಸಾಮಾಜಿಕ ಅಂತರದ ಬಗ್ಗೆ ಅರಿವು ಮೂಡಿಸಿ, ಅಂತರ ಕಾಯ್ದುಕೊಂಡು ಸರದಿಯಂತೆ ಖರೀದಿಸುವಂತೆ ಸೂಚನೆ ನೀಡುತ್ತಿದ್ದ ದೃಶ್ಯಗಳು ಗೋಚರಿಸಿದವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು