ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರು, ನೈರ್ಮಲ್ಯಕ್ಕೆ ಒತ್ತು ನೀಡಿ

ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಸೂಚನೆ
Last Updated 30 ಮಾರ್ಚ್ 2020, 15:25 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ’ಬೇಸಿಗೆ ಚುರುಕು ಪಡೆಯುತ್ತಿದ್ದಂತೆ ಜಿಲ್ಲೆಯಲ್ಲಿ ಅಲ್ಲಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಳ್ಳಲು ಆರಂಭಿಸಿದ್ದು, ಅಧಿಕಾರಿಗಳು ಎಲ್ಲಿಯೂ ನೀರಿಗೆ ಸಮಸ್ಯೆಯಾಗದಂತೆ ನಿಗಾ ವಹಿಸಬೇಕು‘ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ ಅವರು, ’ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜನರು ಅನಾವಶ್ಯಕವಾಗಿ ಮನೆಯಿಂದ ಹೊರಗೆ ಬರುವುದು ನಿರ್ಬಂಧಿಸಬೇಕು. ಇದೇ ವೇಳೆ ಕುಡಿಯುವ ನೀರಿಗೆ ತೊಂದರೆಯಾಗದ ರೀತಿ ಅಧಿಕಾರಿಗಳು ಕೆಲಸ ಮಾಡಬೇಕು‘ ಎಂದು ಹೇಳಿದರು.

’ಈಗಾಗಲೇ ಗ್ರಾಮ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ವ್ಯಾಪ್ತಿಯಲ್ಲಿ ಅಗತ್ಯ ನೀರು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಪಂಚಾಯಿತಿ ವತಿಯಿಂದ ಟ್ಯಾಂಕರ್, ಖಾಸಗಿ ಕೊಳವೆ ಬಾವಿಗಳ ಮೂಲಕ ನೀರಿನ ಸಮಸ್ಯೆ ನೀಗಿಸಲು ಸಂಪೂರ್ಣ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತಿದೆ‘ ಎಂದರು.

’ಕೊರೊನಾ ಭೀತಿಗೆ ನಗರ ಪ್ರದೇಶಗಳಿಂದ ನಾಗರಿಕರು ಹಳ್ಳಿಗಳಿಗೆ ಬಂದಿದ್ದು, ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಜನಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಗೆ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಈ ಬಗ್ಗೆ ಅಧಿಕಾರಿಗಳು ಗಮನ ಹರಿಸಬೇಕು‘ ಎಂದು ತಿಳಿಸಿದರು.

’ಗ್ರಾಮ ಪಂಚಾಯಿತಿ ಮಟ್ಟದಲ್ಲಿಯೂ ಗ್ರಾಮೀಣ ಕಾರ್ಯಪಡೆಯನ್ನು ರಚಿಸಿ ಮಕ್ಕಳು ಮತ್ತು ಹಿರಿಯ ನಾಗರಿಕರ ಆರೋಗ್ಯದ ಮೇಲೆ ಗಮನ ಹರಿಸಬೇಕು. ಗ್ರಾಮದಿಂದ ಗ್ರಾಮಕ್ಕೆ ಜನರು ತೆರಳದಂತೆ ನೋಡಿಕೊಳ್ಳಬೇಕು. ಮದುವೆ, ಜಾತ್ರೆ ಮೆರವಣಿಗೆ ಹಾಗೂ ಗುಂಪು ಚಟುವಟಿಕೆಗಳನ್ನು ನಿಯಂತ್ರಿಸಬೇಕು‘ ಎಂದು ಹೇಳಿದರು.

’ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮದ ಜಲಗಾರರು ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಸಂಬಂಧಪಟ್ಟ ಗ್ರಾಮದ ಮೇಲ್ವಿಚಾರಣೆ ನಡೆಸಬೇಕು. ಕೆಮ್ಮು, ನೆಗಡಿ, ತಲೆನೋವು, ಜ್ವರ, ಗಂಟಲಲ್ಲಿ ಉರಿತ ಲಕ್ಷಣಗಳು ಕಾಣಿಸುವಂತಹ ಜನರನ್ನು ಗುರುತಿಸಿ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಮುಂದಾಗಬೇಕು‘ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ’ಕೊರೊನಾ ವೈರಸ್ ಸೋಂಕು ತಡೆಗೆ ಜನಪ್ರತಿನಿಧಿಗಳು ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ. ಪಂಚಾಯಿತಿ ಸಿಬ್ಬಂದಿ ಹಳ್ಳಿಗಳಲ್ಲಿ ನೈರ್ಮಲ್ಯಕ್ಕೆ ಒತ್ತು ನೀಡಬೇಕು‘ ಎಂದು ಹೇಳಿದರು.

’ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು, ಹಾಲು ಉತ್ಪಾದಕರ ಸಹಕಾರ ಸಂಘಗಳು, ದಿನಸಿ ಅಂಗಡಿಗಳ ಬಳಿ ಈಗಾಗಲೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ನೋಡಿಕೊಳ್ಳಲಾಗುತ್ತಿದೆ. ಅಂಗನವಾಡಿ ಮಕ್ಕಳು, ಗರ್ಭಿಣಿಯರ ಮನೆಗೇ ಆಹಾರ ಪದಾರ್ಥ ತಲುಪಿಸಲು ಕ್ರಮಕೈಗೊಳ್ಳಲಾಗುತ್ತಿದೆ‘ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನೋಮೇಶ್, ಕಾರ್ಯಪಾಲಕ ಎಂಜಿನಿಯರ್ ಶಿವಕುಮಾರ್ ಜಿ. ಲೋಕರ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT