ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಪ್ರಿಯಾಂಕ ಖರ್ಗೆ ಭೇಟಿಯಾದ ನೌಕರರ ಕ್ಷೇಮಾಭಿವೃದ್ಧಿ ಸಂಘ

Published 30 ಮೇ 2023, 13:54 IST
Last Updated 30 ಮೇ 2023, 13:54 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ಕ್ಲರ್ಕ್ ಕಂ ಡಾಟಾ ಎಂಟ್ರಿ ಆಪರೇಟರ್ ನೌಕರರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಸಮಿತಿಯ ಪದಾಧಿಕಾರಿಗಳು ಮಂಗಳವಾರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು.

ಸಮಿತಿಯ ರಾಜ್ಯಾಧ್ಯಕ್ಷ ಭೀಮರೆಡ್ಡಿ ಪಾಟೀಲ್ ನೇತೃತ್ವದಲ್ಲಿ ನೂತನ ಸಚಿವರನ್ನು ಭೇಟಿ ಮಾಡಿದ ಪದಾಧಿಕಾರಿಗಳು, ಡಾಟಾ ಎಂಟ್ರಿ ಆಪರೇಟರ್ ಮತ್ತು ಇನ್ನಿತರ ನೌಕರರ ಸಮಸ್ಯೆಗಳ ಬಗ್ಗೆ ಹಾಗೂ ಬೇಡಿಕೆಗಳ ಕುರಿತು ಸಚಿವರೊಂದಿಗೆ ಚರ್ಚಿಸಿ ಮನವಿಯನ್ನು ಸಲ್ಲಿಸಿದರು.

ಈ ವೇಳೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ನೌಕರರ ಸಮಸ್ಯೆಗಳಿಗೆ ಸೂಕ್ತ ಸ್ಪಂಧಿಸಿ ತ್ವರಗತಿಯಲ್ಲಿ ಸಭೆ ಕರೆದು ಇತ್ಯರ್ಥ ಪಡಿಸಲಾಗುವುದು ಎಂದು ಭರವಸೆ ನಿಡಿದರು. ಈ ಸಂದರ್ಭದಲ್ಲಿ ಸಂಘದ ಚಿಕ್ಕಬಳ್ಳಾಪುರ ಜಿಲ್ಲಾ ಅಧ್ಯಕ್ಷ ಹಾಗೂ ರಾಜ್ಯ ಸಂಘಟಕ ಡಿ.ಎನ್.ಜಗದೀಶ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT