ಗೌರಿಬಿದನೂರು: ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಲ್ಲಿ ಒಳ ಮೀಸಲಾತಿ ಬೆಂಬಲಿಸಲು ಸಂಘಟನೆಯ ಪದಾಧಿಕಾರಿಗಳ ಜತೆಗೆ ಅಂಬೇಡ್ಕರ್ ಸ್ತೂಪಕ್ಕೆ ಮಾಲಾರ್ಪಣೆ ಮಾಡಿ ನಂತರ ಮಾತನಾಡಿದ ಸಂಘಟನೆಯ ಜಿಲ್ಲಾ ಸಂಘಟನಾ ಸಂಚಾಲಕ ಹುದುಗೂರು ಕೆ.ನಂಜುಂಡಪ್ಪ, ‘ಒಳಮೀಸಲಾತಿ ಜಾರಿ ಮಾಡುವ ಅಧಿಕಾರವು ಆಯಾ ರಾಜ್ಯ ಸರ್ಕಾರಗಳಿಗೆ ಇದೆ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದರಿಂದ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ಒಳ ಮೀಸಲಾತಿ ವರದಿಯನ್ನು ವಿಧಾನಸಭಾ ಅಧಿವೇಶನದಲ್ಲಿ ಮಂಡಿಸಿ ಕಾಯ್ದೆಯನ್ನು ಜಾರಿಗೊಳಿಸಬೇಕು’ ಎಂದು ಆಗ್ರಹಿಸಿದರು.

ಅಲ್ಲದೆ, ಶೀಘ್ರವೇ ಒಳ ಮೀಸಲಾತಿ ಜಾರಿಗೆ ತರುವ ಸಲುವಾಗಿ ರಾಜ್ಯದಾದ್ಯಂತ ಏಕಕಾಲದಲ್ಲಿ ಆಯಾ ಜಿಲ್ಲಾಧಿಕಾರಿಗಳ ಕಚೇರಿಗಳ ಮುಂದೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

ಈ ವೇಳೆ ಸಂಘಟನೆಯ ಪದಾಧಿಕಾರಿಗಳಾದ ರಾಮಾಂಜಿನಪ್ಪ, ವೆಂಕಟೇಶ್, ಕೃಷ್ಣಪ್ಪ, ಗೋಪಿನಾಥ್, ನರಸಿಂಹಮೂರ್ತಿ, ರಾಮು ಬಾಲಾಜಿ, ರಾಜಪ್ಪ, ಕೃಷ್ಣ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.