ಮಂಗಳವಾರ, ಜನವರಿ 28, 2020
22 °C
ಬಹುಜನ ವಿದ್ಯಾರ್ಥಿ ಸಂಘ ವತಿಯಿಂದ ರಾಜ್ಯ ಮಟ್ಟದ ಸಂವಿಧಾನ ಜಾಗೃತಿ ಸಮ್ಮೇಳನದ ಅಂಗವಾಗಿ ರಾಜ್ಯ ಮಟ್ಟದ ಸ್ಪರ್ಧೆ

ವಿದ್ಯಾರ್ಥಿಗಳ ಜಾಗೃತಿಗೆ ಪ್ರಬಂಧ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ‘ವಿದ್ಯಾರ್ಥಿಗಳಲ್ಲಿ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಬಹುಜನ ವಿದ್ಯಾರ್ಥಿ ಸಂಘ (ಬಿವಿಎಸ್‌) ರಾಜ್ಯ ಮಟ್ಟದ ಸಂವಿಧಾನ ಜಾಗೃತಿ ಸಮ್ಮೇಳನದ ಅಂಗವಾಗಿ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ ಹಮ್ಮಿಕೊಂಡಿದೆ’ ಎಂದು ಬಿವಿಎಸ್‌ನ ಜಿಲ್ಲಾ ಘಟಕದ ಸಹ ಸಂಯೋಜಕ ಎನ್.ದಿಲೀಪ್ ಕುಮಾರ್ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಂವಿಧಾನ ಸಮರ್ಪಣ ದಿನವಾದ ನ. 26ರಿಂದ ಸಂವಿಧಾನ ಜಾರಿಯಾದ ಜ.26ರ ವರೆಗೆ ಸಂವಿಧಾನ ಜಾಗೃತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ಫೆ. 2ರಂದು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ. ತಾಲ್ಲೂಕು ಮಟ್ಟದಿಂದ 20 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ಜಿಲ್ಲಾ ಮಟ್ಟಕ್ಕೆ ಕಳುಹಿಸಿ ಕೊಡಲಾಗುತ್ತದೆ. ಜಿಲ್ಲಾ ಮಟ್ಟದಿಂದ 60 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ರಾಜ್ಯಮಟ್ಟಕ್ಕೆ ಕಳುಹಿಸಲಾಗುವುದು’ ಎಂದರು.

‘ಸ್ನಾತಕೋತ್ತರ, ಪದವಿ ವಿದ್ಯಾರ್ಥಿ ವಿಭಾಗದಲ್ಲಿ ಪ್ರಥಮ ಬಹುಮಾನ ₹1 ಲಕ್ಷ, ದ್ವಿತೀಯ ಬಹುಮಾನ ₹50 ಸಾವಿರ, ತೃತೀಯ ಬಹುಮಾನ ₹25 ಸಾವಿರ ನಗದು ಪುರಸ್ಕಾರ ದೊರೆಯಲಿದೆ. 10 ವಿದ್ಯಾರ್ಥಿಗಳಿಗೆ ತಲಾ ₹5,000 ಸಮಾಧಾನಕರ ಬಹುಮಾನ ನೀಡಲಾಗುತ್ತದೆ. ಪಿಯುಸಿ ಹಾಗೂ ತತ್ಸಮಾನ ಕೋರ್ಸ್‌ಗಳ ವಿಭಾಗದಲ್ಲಿ ಪ್ರಥಮ ಬಹುಮಾನ ₨50 ಸಾವಿರ, ದ್ವಿತೀಯ ಬಹುಮಾನ ₹25 ಸಾವಿರ, ತೃತೀಯ ಬಹುಮಾನ ₹15 ಸಾವಿರ ಹಾಗೂ 10 ವಿದ್ಯಾರ್ಥಿಗಳಿಗೆ ತಲಾ ₹3,000 ಸಮಾಧಾನಕರ ಬಹುಮಾನ ನೀಡಲಾಗುತ್ತದೆ’ ಎಂದು ಹೇಳಿದರು.

‘ಪ್ರೌಢ ಶಾಲಾ ವಿಭಾಗದಲ್ಲಿ ಪ್ರಥಮ ಬಹುಮಾನ ₹25 ಸಾವಿರ, ದ್ವಿತೀಯ ಬಹುಮಾನ ₹15 ಸಾವಿರ, ತೃತೀಯ ಬಹುಮಾನ ₹5,000 ನಗದು ಪುರಸ್ಕಾರ ನೀಡಲಾಗುತ್ತದೆ. 10 ವಿದ್ಯಾರ್ಥಿಗಳಿಗೆ ತಲಾ ₹2,000 ಸಮಾಧಾನಕರ ಬಹುಮಾನ ನೀಡಲಾಗುತ್ತದೆ’ ಪ್ರಬಂಧವನ್ನು 2020ರ ಜನವರಿ 10ರ ಒಳಗೆ ಅಂಚೆ ಅಥವಾ ಇ ಮೇಲ್‌ ವಿಳಾಸಕ್ಕೆ ತಲುಪಿಸಬೇಕು’ ಎಂದು ಮಾಹಿತಿ ನೀಡಿದರು. ಬಿವಿಎಸ್ ಜಿಲ್ಲಾ ಘಟಕದ ಕಾರ್ಯದರ್ಶಿ ನರಸಿಂಹಮೂರ್ತಿ, ತಾಲ್ಲೂಕು ಘಟಕ ಅಧ್ಯಕ್ಷ ಮುನಿರಾಜ್ ಮುಖಂಡರಾದ ಬಾಲಾಜಿ, ರಾಮಾಂಜಿ ಹಾಜರಿದ್ದರು.

ಪ್ರಬಂಧ ಕಳುಹಿಸಬೇಕಾದ ವಿಳಾಸ: # ನಂ1, 16 ನೇ ಅಡ್ಡ ರಸ್ತೆ, ಗಣಪತಿ ದೇವಾಲಯ ಎದುರು 1 ನೇ ಮಹಡಿ, ಲಕ್ಕಸಂದ್ರ ಬೆಂಗಳೂರು–560030 ಇಮೇಲ್ :seenaga@gmail.com.ಅಥವಾ ಮಾಹಿತಿಗೆ ಮೊಬೈಲ್ 8217014079 ಸಂಪರ್ಕಿಸಬಹುದು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು