ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ಕಡಿವಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಿ

ಕೊರೊನಾ ಸೈನಿಕರ ಸನ್ಮಾನ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬೈರಪ್ಪ ಶಿವಲಿಂಗ ನಾಯಿಕ ಸಲಹೆ
Last Updated 19 ಸೆಪ್ಟೆಂಬರ್ 2020, 15:31 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ‘ಇಡೀ ಜಗತ್ತನ್ನೇ ತಲ್ಲಣಗೊಳಿಸಿದ ಕೋವಿಡ್‌ನಂತಹ ದೊಡ್ಡ ಜೈವಿಕ ವಿಪತ್ತಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಾರ್ವಜನಿಕರು ಕೈಜೋಡಿಸಬೇಕು’ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಬೈರಪ್ಪ ಶಿವಲಿಂಗ ನಾಯಿಕ ಹೇಳಿದರು.

ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆ, ವಾರ್ತಾ ಇಲಾಖೆ ಸಹಯೋಗದಲ್ಲಿ ನಗರದಲ್ಲಿ ಶನಿವಾರ ಆಯೋಜಿಸಿದ್ದ ಕೊರೊನಾ ಸೈನಿಕರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮನುಕುಲಕ್ಕೆ ದೊಡ್ಡ ಕಂಟಕವಾಗಿರುವ ಸೋಂಕನ್ನು ತಡೆಗಟ್ಟುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ಆ ನಿಟ್ಟಿನಲ್ಲಿ ಜನರು ಕೋವಿಡ್‌ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಬೇಕು. ಸೋಂಕಿನ ಲಕ್ಷಣಗಳು ಕಂಡುಬಂದ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳಬೇಕು. ಭಯಕ್ಕಿಂತಲೂ ಅರಿವು ಇಂದಿನ ಅಗತ್ಯವಾಗಿದೆ’ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಆರ್.ಲತಾ ಮಾತನಾಡಿ, ‘ಜಿಲ್ಲೆಯಲ್ಲಿ ಕೊರೊನಾ ಸೋಂಕನ್ನು ತ್ವರಿತಗತಿಯಲ್ಲಿ ಪತ್ತೆ ಹಚ್ಚುವ ಜತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಸೋಂಕು ಹರಡುವುದು ತಡೆಗಟ್ಟುವ ನಿಟ್ಟಿನಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಕಾರ್ಯಪಡೆಗಳನ್ನು ರಚಿಸಲಾಗಿದೆ. ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಲಾಗಿದೆ’ ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಉಪ ತಹಶೀಲ್ದಾರ್ ತುಳಸಿ, ಶಿಕ್ಷಕ ಮಹಾಂತೇಶ್ ಕಾಟಪೂರಮಠ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT