ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಜೆಟ್‌ನಲ್ಲಿ ನಿವೃತ್ತ ನೌಕರರಿಗೆ ಸೌಲಭ್ಯ ನಿರೀಕ್ಷೆ

Last Updated 14 ಫೆಬ್ರುವರಿ 2021, 2:51 IST
ಅಕ್ಷರ ಗಾತ್ರ

ಚಿಂತಾಮಣಿ: ಮಾರ್ಚ್‌ನಲ್ಲಿ ಮಂಡನೆಯಾಗಲಿರುವ ರಾಜ್ಯ ಬಜೆಟ್‌ನಲ್ಲಿ ನಿವೃತ್ತ ಸರ್ಕಾರಿ ನೌಕರರಿಗೆ ಸೌಲಭ್ಯಗಳು ದೊರೆಯುವ ನಿರೀಕ್ಷೆ ಇದೆ ಎಂದು ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ ಆಶಿಸಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಶನಿವಾರ ಆಯೋಜಿಸಲಾಗಿದ್ದ ತಾಲ್ಲೂಕು ನಿವೃತ್ತ ಸರ್ಕಾರಿ ನೌಕರರ ಸಂಘದ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ನಿವೃತ್ತ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಅರೋಗ್ಯ ಸಂಜೀವಿನಿ ಯೋಜನೆ, 70 ವರ್ಷ ಮೀರಿರುವವರಿಗೆ ಶೇ 10ರಷ್ಟು ಇನ್ಕ್ರಿಮೆಂಟ್ ಸೇರಿದಂತೆ ಇನ್ನಿತರೆ ಬೇಡಿಕೆಗಳ ಬಗ್ಗೆ ಚರ್ಚಿಸಿದ್ದಾರೆ. ಮುಖ್ಯಮಂತ್ರಿ ಅವರಿಂದಲೂ ಉತ್ತಮ ಪ್ರತಿಕ್ರಿಯೆ ದೊರೆತಿದೆ ಎಂದು ತಿಳಿಸಿದರು.

ನಗರದಲ್ಲಿರುವ ಬ್ಯಾಂಕ್ಗ‌ಳಲ್ಲಿ ನಿವೃತ್ತ ನೌಕರರ ಹಾಗೂ ಹಿರಿಯ ನಾಗರಿಕರ ಕೆಲಸ ಕಾರ್ಯಗಳನ್ನು ಸುಗಮವಾಗಿ ಮತ್ತು ತ್ವರಿತವಾಗಿ ಮಾಡಿಕೊಟ್ಟು ಸಹಕರಿಸುವಂತೆ ಬ್ಯಾಂಕ್ ಮ್ಯಾನೇಜರ್‌ಗಳಿಗೆ ಮನವಿ ಮಾಡಲಾಗಿದೆ. ನೌಕರರ ಭವನದ ಆವರಣದಲ್ಲಿರುವ ನಿವೃತ್ತ ನೌಕರರ ಕಚೇರಿಯಲ್ಲಿ ಪ್ರತಿ ದಿನ ಬೆಳಿಗ್ಗೆ 11ರಿಂದ 12 ಗಂಟೆವರೆವಿಗೆ ಸಂಘದ ಪದಾಧಿಕಾರಿಗಳು ಹಾಜರಿರುತ್ತಾರೆ. ಆ ಸಮಯದಲ್ಲಿ ಸದಸ್ಯರು ಬಂದು ತಮ್ಮ ಕುಂದುಕೊರತೆ ತಿಳಿಸಬಹುದು ಎಂದು ನುಡಿದರು.

ನಿವೃತ್ತ ಜಿಲ್ಲಾ ವೈದ್ಯಾಧಿಕಾರಿ ಡಾ.ವರದರಾಜನ್ ಮಾತ ನಾಡಿ,ಕೋವಿಡ್ ಲಸಿಕೆ ಕುರಿತು ಯಾವುದೇ ಯಾವುದೇ ಅನುಮಾನ ಬೇಡ. ನಿರ್ಭಯವಾಗಿ ಲಸಿಕೆ ಪಡೆದುಕೊಳ್ಳಬಹುದು. ಸದ್ಯಕ್ಕೆ ಕೊರೊನಾ ಕ್ಷೀಣಿಸುತ್ತಿದ್ದರೂ ಇನ್ನೂ ಮುಂಜಾಗ್ರತೆ ವಹಿಸುವುದು ಅಗತ್ಯ. ಕೋವಿಡ್ ನಿಯಮಗಳ ಬಗ್ಗೆ ಉದಾಸೀನತೆ ತೋರದೆ ಪಾಲಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಉಪಾಧ್ಯಕ್ಷ ಎನ್. ಲಕ್ಷ್ಮೀನಾರಾಯಣ, ಪ್ರಧಾನ ಕಾರ್ಯದರ್ಶಿ ಎಸ್. ಆಂಜನಪ್ಪ, ಎನ್. ವೆಂಕಟರಾಯಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT