ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂತಾಮಣಿ: ‘ಅಲೆಮಾರಿ ಸಮುದಾಯಕ್ಕೆ ಸೌಲಭ್ಯ ಕಲ್ಪಿಸಿ’-ತಹಶೀಲ್ದಾರ್ ಹನುಮಂತರಾಯಪ್ಪ

Last Updated 11 ಫೆಬ್ರುವರಿ 2022, 2:50 IST
ಅಕ್ಷರ ಗಾತ್ರ

ಚಿಂತಾಮಣಿ: ‘ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದ ವಸತಿರಹಿತರಿಗೆ ವಸತಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮಕೈಗೊಳ್ಳಬೇಕು’ ಎಂದು ತಹಶೀಲ್ದಾರ್ ಹನುಮಂತರಾಯಪ್ಪ ಹೇಳಿದರು.

ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ 2021-22ನೇ ಸಾಲಿನ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಅಲೆಮಾರಿಗಳು ಒಂದೆಡೆ ನೆಲೆ ನಿಲ್ಲುವುದಿಲ್ಲ.ಒಂದು ಪ್ರದೇಶದಿಂದ ಇನ್ನೊಂದು ಪ್ರದೇಶಕ್ಕೆ ವಲಸೆ ಹೋಗುತ್ತಾರೆ. ಇದರಿಂದ ಶೈಕ್ಷಣಿಕ ಹಾಗೂ ಆರ್ಥಿಕವಾಗಿ ಅತ್ಯಂತ ಹಿಂದುಳಿದಿದ್ದಾರೆ. ಅವರಿಗೆ ವಸತಿ ಸೌಲಭ್ಯ ಕಲ್ಪಿಸಿ ಒಂದೆಡೆ ನೆಲೆ ನಿಲ್ಲಲು ಅವಕಾಶ ಮಾಡಿಕೊಡಬೇಕು. ಕಾನೂನಿನ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.

ಪ್ರಗತಿ ಪರಿಶೀಲನಾ ಸಭೆಗೆ ಗೈರುಹಾಜರಾಗಿರುವ ಅಧಿಕಾರಿಗಳು ಒಂದು ವಾರದೊಳಗೆ ಅನುಪಾಲನಾ ವರದಿ ನೀಡಬೇಕು. ಇಲ್ಲದಿದ್ದರೆ ಅಂತಹವರ ವಿರುದ್ಧ ಕ್ರಮಕೈಗೊಳ್ಳಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು. ತಮ್ಮ ಇಲಾಖೆಗಳಲ್ಲಿ ದೊರೆಯುವ ಸೌಲಭ್ಯ ತಲುಪಿಸಬೇಕು. ಜತೆಗೆ, ಸೌಲಭ್ಯ ಕುರಿತು ಜಾಗೃತಿ ಮೂಡಿಸಬೇಕು ಎಂದು
ಸೂಚಿಸಿದರು.

ಜಿಲ್ಲಾ ನಾಮನಿರ್ದೇಶನ ಸದಸ್ಯ ಕೋಡೇಗಂಡ್ಲು ಸುರೇಶ್ ಮಾತನಾಡಿ, ಖಾಸಗಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ ಶುಲ್ಕ ಪಡೆಯುತ್ತಿವೆ. ಇದರಿಂದ ಸಮುದಾಯದವರ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗಿದೆ. ಅಲೆಮಾರಿ ಮತ್ತು ಅರೆಅಲೆಮಾರಿ ಸಮುದಾಯದವರಿಗೆ ರಿಯಾಯಿತಿ ದರದಲ್ಲಿ ಶಿಕ್ಷಣ ಸೌಲಭ್ಯ ಕಲ್ಪಿಸಬೇಕು. ಸಮುದಾಯದ ಅಭಿವೃದ್ಧಿಗೆ ನಗರ ಪ್ರದೇಶದಲ್ಲಿ 2 ಎಕರೆ ಜಮೀನು ಮಂಜೂರು ಮಾಡಬೇಕು ಎಂದು ಮನವಿ ಮಾಡಿದರು.

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ, ತೋಟಗಾರಿಕೆ ಇಲಾಖೆಯ ಅಧಿಕಾರಿ ರಾಜೇಶ್, ಬಿಸಿಎಂ ವಿಸ್ತರಣಾಧಿಕಾರಿ ನಾರಾಯಣಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಸ್ವಾತಿ, ಮುಖಂಡರಾದ ಪುಂಗನೂರು ನಾರಾಯಣಸ್ವಾಮಿ, ಸುರೇಶಬಾಬು, ಆಂಜನಪ್ಪ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT