ಬುಧವಾರ, ಸೆಪ್ಟೆಂಬರ್ 22, 2021
24 °C

ಚಿಂತಾಮಣಿ: ರೈತ ವಿದ್ಯಾಸಿರಿ ನಿಧಿ ಸದ್ಬಳಕೆಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್‌ಹಾಲ್‌ನಲ್ಲಿ ಭಾನುವಾರ ನಡೆದ ಮುಖ್ಯಮಂತ್ರಿ ರೈತ ವಿದ್ಯಾಸಿರಿ ನಿಧಿ ಲೋಕಾರ್ಪಣೆ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆ ವ್ಯವಸ್ಥೆಯನ್ನು ತಾಲ್ಲೂಕಿನ ಎಲ್ಲಾ ಹೋಬಳಿ ಕೇಂದ್ರಗಳಲ್ಲೂ ಮಾಡಲಾಗಿತ್ತು.

ಕಸಬಾ ಹೋಬಳಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಉಪ ನಿರ್ದೇಶಕಿ ಅನುರೂಪಾ ಮಾತನಾಡಿ, ‘ರಾಜ್ಯ ಸರ್ಕಾರ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ ಪೋತ್ಸಾಹಿಸಲು ರೈತ ವಿದ್ಯಾನಿಧಿ ಶಿಷ್ಯವೇತನ ರೂಪಿಸಿದೆ’ ಎಂದು ತಿಳಿಸಿದರು.

ಕೃಷಿ, ತೋಟಗಾರಿಕೆ, ರೇಷ್ಮೆ ಇಲಾಖೆ ಮೂಲಕ ರೈತರು ಮಾಹಿತಿ ಪಡೆದು ದಾಖಲಾತಿಗಳನ್ನು ಇಲಾಖೆಗಳಲ್ಲಿ ನೀಡಿ ಸದರಿ ಯೋಜನೆಯನ್ನು ಸದುಪಯೋಗ ಮಾಡಿಕೊಳ್ಳಲು ಅರಿವು ಮೂಡಿಸಲಾಗುತ್ತದೆ ಎಂದು ತಿಳಿಸಿದರು.

ಸಹಾಯಕ ಕೃಷಿ ನಿರ್ದೇಶಕ ಡಾ.ಶ್ರೀನಿವಾಸ್, ಕೃಷಿ ಅಧಿಕಾರಿ ನೇತ್ರಾವತಿ, ತಾಂತ್ರಿಕ ಅಧಿಕಾರಿ ದೇವಪ್ಪ, ರಾಜೇಶ್, ಗಂಗುಲಪ್ಪ, ಜಲಾನಯನ ತಂಡದ ಪಾಪಿರೆಡ್ಡಿ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.