ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ ಫಲವತ್ತಾದ ಕೃಷಿ ಭೂಮಿಯನ್ನು ಕೈಗಾರಿಕೀಕರಣಕ್ಕೆ ವಶಪಡಿಸಿಕೊಳ್ಳಲು ಮುಂದಾಗಿರುವ ಸರ್ಕಾರದ ಕ್ರಮ ವಿರೋಧಿಸಿ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ರೈತ ಸಂಘದ ನೇತೃತ್ವದಲ್ಲಿ ಗ್ರಾಮಸ್ಥರು ಅಹೋರಾತ್ರಿ ಧರಣಿ ಆರಂಭಿಸಿದ್ದಾರೆ.

ಬುಧವಾರ (ಜುಲೈ 2) ನಂದಿಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರೈತರ ಹೋರಾಟ ಕಾವು ಪಡೆದಿದೆ.

ಟ್ರ್ಯಾಕ್ಟರ್ಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿಗೆ ಬಂದ ರೈತರು ಸರ್ಕಾರ ಮತ್ತು ಕೆಐಎಡಿಬಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಜಿಲ್ಲಾಡಳಿತ ಭವನದ ಒಳಗೆ ಪ್ರತಿಭಟನಕಾರರು ಪ್ರವೇಶಿಸದಂತೆ ಗೇಟ್ನಲ್ಲಿಯೇ ಪೊಲೀಸ್ ಪಹರೆ ಹಾಕಲಾಗಿತ್ತು. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ರೈತರು ಸಮಾವೇಶಗೊಂಡರು. ಹೋರಾಟ ನಿಲ್ಲುವುದಿಲ್ಲ, ಭೂಮಿ ಕೊಡುವುದಿಲ್ಲ ಎಂದು ಘೋಷಿಸಿದರು.

ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ‘ಭವಿಷ್ಯದ ಆಹಾರ ಉತ್ಪಾದನೆಗೆ ಕೃಷಿ ಭೂಮಿ ಮೀಸಲಿಡಬೇಕು ಎನ್ನುವುದು ಕಾಯ್ದೆಗಳ ಉದ್ದೇಶ. ರೈತರಲ್ಲದವರು ರೈತರ ಭೂಮಿಯನ್ನು ಯಾವುದೇ ಕಾರಣಕ್ಕೂ ಖರೀದಿಸಬಾರದು ಎಂದು ಕಾಯ್ದೆ ಹೇಳುತ್ತದೆ. ಸಿದ್ದರಾಮಯ್ಯ ಅವರು ವಿರೋಧ ಪಕ್ಷದಲ್ಲಿ ಇದ್ದಾಗ ಈ ಕಾಯ್ದೆ ವಾಪಸ್ ಪಡೆಯುತ್ತೇವೆ ಎಂದಿದ್ದರು. ಆದರೆ ಈಗ ಆ ಮಾತನ್ನೇ ಆಡುತ್ತಿಲ್ಲ’ ಎಂದು ಟೀಕಿಸಿದರು.

ಕಳೆದ ಎರಡು ವರ್ಷದಿಂದ ಭೂಮಿಯ ವರ್ಗಾವಣೆ ಮೂಲಕ ಉಪನೋಂದಣಾಧಿಕಾರಿ ಕಚೇರಿಗಳಿಂದ ಸರ್ಕಾರದ ಬೊಕ್ಕಸಕ್ಕೆ ₹25 ಸಾವಿರ ಕೋಟಿ ಬಂದಿದೆ. ಮುಂದಿನ ಬಜೆಟ್ ವೇಳೆಗೆ ಇದನ್ನು ₹35 ಸಾವಿರ ಕೋಟಿಗೆ ಹೆಚ್ಚಿಸುವ ಗುರಿ ಸರ್ಕಾರಕ್ಕೆ ಇದೆ. ಇಂತಹ ಸರ್ಕಾರ ರೈತರ ಪರವೇ? ನಂದಿಗಿರಿಧಾಮದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಕಾಯ್ದೆ ವಾಪಸ್ ಪಡೆಯುವ ತೀರ್ಮಾನ ಆಗಬೇಕು ಎಂದು ಆಗ್ರಹಿಸಿದರು.

2000ನೇ ಸಾಲಿನಿಂದ 2025ರವರೆಗೆ ರಾಜ್ಯದಲ್ಲಿ ಕೈಗಾರಿಕೆಗಳ ಹೆಸರಿನಲ್ಲಿ 2.5 ಲಕ್ಷ ಎಕರೆ ಜಮೀನನ್ನು ಸ್ವಾಧೀನಕ್ಕೆ ಪಡೆಯಲಾಗಿದೆ. ಈ ಬಗ್ಗೆ ಲ್ಯಾಂಡ್ ಆಡಿಟ್ ವರದಿಯನ್ನು ಬಿಡುಗಡೆ ಮಾಡಲು ಸರ್ಕಾರಕ್ಕೆ ಯೋಗ್ಯತೆ ಇದೆಯಾ? ಎಷ್ಟು ಕೈಗಾರಿಕೆಗೆ ಈ ಜಮೀನು ಬಳಸಲಾಗಿದೆ, ರಿಯಲ್ ಎಸ್ಟೇಟ್ಗೆ ಎಷ್ಟು ಬಳಕೆ ಆಗಿದೆ ಎಂದು ತಿಳಿಸಬೇಕು ಎಂದು ಆಗ್ರಹಿಸಿದರು.

ರಾಜಕಾರಣಿಗಳು ರೈತರನ್ನು ಒಬ್ಬರ ಮೇಲೆ ಮತ್ತೊಬ್ಬರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಆದರೆ ಇದು ದೀರ್ಘವಾಗಿ ನಡೆಯುವುದಿಲ್ಲ. ಕೃಷಿ ಭೂಮಿ ನಗರದ ಪಕ್ಕದಲ್ಲಿಯೇ ಇರಲಿ, ಕಾಡಂಚಿನಲ್ಲಿಯೇ ಇರಲಿ ಅನ್ಯ ಉದ್ದೇಶಕ್ಕೆ ಬಳಕೆ ಮಾಡಬಾರದು ಎಂಬ ಕಾನೂನು ಜಾರಿಗೊಳಿಸಬೇಕು ಎಂದರು.

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಗ್ರಾಮಗಳ ಕೃಷಿ ಭೂಮಿಯನ್ನು ಯಾವುದೇ ಕಾರಣಕ್ಕೂ ಕೈಗಾರಿಕೆಗಳಿಗೆ ನೀಡುವುದಿಲ್ಲ. ಈ ಹೋರಾಟ ನಿಲ್ಲುವುದಿಲ್ಲ ಎಂದು ಎಚ್ಚರಿಸಿದರು.

ದಲಿತ ಚಳವಳಿ ಮುಖಂಡ ಎಂ.ಗೋಪಿನಾಥ್ ಮಾತನಾಡಿ, ಉದ್ಯಮಿಗಳು ಕೇಳುವುದೆಲ್ಲವನ್ನೂ ಕೊಟ್ಟರೆ ಮುಂದೆ ವಿಧಾನಸೌಧ, ನ್ಯಾಯಾಲಯದ ಜಾಗವೂ ಬೇಕು ಎನ್ನುತ್ತಾರೆ. ಆಗ ಸರ್ಕಾರ ಕೊಡುತ್ತದೆಯೇ ಎಂದು ಪ್ರಶ್ನಿಸಿದರು.

ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಂಡರೆ ರೈತರು ಬದುಕುವುದು ಹೇಗೆ. ರೈತರಷ್ಟೇ ಅಲ್ಲ ಆಹಾರ ಉತ್ಪಾದನೆ ಹೇಗೆ ಸಾಧ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಜಿಲ್ಲಾ ಅಧ್ಯಕ್ಷ ರಾಮನಾಥ್, ಶಿಡ್ಲಘಟ್ಟ ಮಾಜಿ ಶಾಸಕ ಎಂ.ರಾಜಣ್ಣ, ಬಿಜೆಪಿ ಜಿಲ್ಲಾ ಅಧ್ಯಕ್ಷ ಸೀಕಲ್ ರಾಮಚಂದ್ರಗೌಡ, ದಲಿತ ಸಂಘರ್ಷ ಸಮಿತಿಯ ಬಿ.ಎನ್.ಗಂಗಾಧರ್, ಎನ್.ಮೂರ್ತಿ ಹಾಗೂ ರೈತ ಸಂಘ, ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಧರಣಿಯಲ್ಲಿ ಪಾಲ್ಗೊಂಡಿದ್ದರು.

ಸಿ.ಎಂ ಜೊತೆ ಮಾತುಕತೆಗೆ ಪಟ್ಟು

ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಧರಣಿನಿರತರನ್ನು ಭೇಟಿ ಮಾಡಿದರು. ಮುಖ್ಯಮಂತ್ರಿ ಅವರಿಗೆ ಈ ಬಗ್ಗೆ ಮಾಹಿತಿ ನೀಡಲಾಗುವುದು ಎಂದರು. ಆದರೆ ಧರಣಿನಿರತರು ಮುಖ್ಯಮಂತ್ರಿ ಅವರನ್ನು ನಾವೇ ಖುದ್ದಾಗಿ ಭೇಟಿ ಮಾಡಿ ಮಾತುಕತೆ ನಡೆಸಬೇಕು. ಇದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಪಟ್ಟು ಹಿಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.