ಚಿಕ್ಕಬಳ್ಳಾಪುರ: ಸಚಿವ ಸಂಪುಟ ಸಭೆಗಾಗಿ ನಂದಿ ಗಿರಿಧಾಮಕ್ಕೆ ಬರುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಬೇಕು ಎಂದು ಪಟ್ಟು ಹಿಡಿದು ನಗರದ ಜಿಲ್ಲಾಡಳಿತ ಭವನದ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮನವೊಲಿಸುವಲ್ಲಿ ಜಿಲ್ಲಾಡಳಿತ ಯಶಸ್ವಿಯಾಗಿದೆ.

ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯ 13 ಹಳ್ಳಿಗಳ 2,823 ಎಕರೆ ಕೃಷಿ ಭೂಮಿಯನ್ನು ಕೈಗಾರಿಕೀಕರಣಕ್ಕೆ ವಶಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ.

ಭೂ ಸ್ವಾಧೀನ ವಿರೋಧಿಸಿ ರೈತ ಸಂಘದ ನೇತೃತ್ವದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಬುಧವಾರ ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆಯಲ್ಲಿ ಸರ್ಕಾರದ ಗಮನ ಸೆಳೆಯಲು ರೈತ ಹೋರಾಟಗಾರರು ಮುಂದಾಗಿದ್ದರು.

ಮಂಗಳವಾರದಿಂದ ಜಿಲ್ಲಾಡಳಿತ ಭವನದ ಮುಂಭಾಗ ಅಹೋರಾತ್ರಿ ಧರಣಿ ಆರಂಭಿಸಿದ್ದರು. ಮಂಗಳವಾರ ರಾತ್ರಿ ನಡುರಾತ್ರಿ ಸ್ಥಳಕ್ಕೆ ಬಂದ ಅಧಿಕಾರಿಗಳು ನಂದಿಗಿರಿಧಾಮದಲ್ಲಿ ಸಿ.ಎಂ ಭೇಟಿ ಸಾಧ್ಯವಾಗುವುದಿಲ್ಲ. ಜು.4ರಂದು ನಾವೇ ನಿಮ್ಮನ್ನು ಮುಖ್ಯಮಂತ್ರಿ ಅವರ ಬಳಿಗೆ ಕರೆದೊಯ್ಯುತ್ತೇವೆ ಎಂದು ಭರವಸೆ ನೀಡಿದರು. ಧರಣಿನಿರತ ರೈತರು ರಾತ್ರೋರಾತ್ರಿ ವಾಪಸ್ಸಾಗಿದ್ದಾರೆ.

ಸಂಪುಟಸಭೆ ಕಾರಣದಿಂದ ನಂದಿಗಿರಿಧಾಮದಲ್ಲಿ ಮುಖ್ಯಮಂತ್ರಿ ಭೇಟಿ ಸಾಧ್ಯವಿಲ್ಲ. ಜುಲೈ 4ರಂದು ನಿಯೋಗ ಕರೆದೊಯ್ಯುತ್ತೇವೆ ಎಂದು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಭರವಸೆ ನೀಡಿದೆ. ಆ ಕಾರಣದಿಂದ ಪ್ರತಿಭಟನೆ ವಾಪಸ್ ಪಡೆದಿದ್ದೇವೆ ಎಂದು ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ ಪ್ರಜಾವಾಣಿಗೆ ತಿಳಿಸಿದರು.

ನೆರೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಯಲ್ಲಿ ಕೈಗಾರಿಕೆಗಾಗಿ ಭೂ ಸ್ವಾಧೀನ ವಿರೋಧಿಸಿ ಅಲ್ಲಿನ ರೈತರು ಸಹ ಮೂರು ವರ್ಷಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.