ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೆಕ್ಕಾ ಜಾಮ್‌ಗೆ ರೈತರ ಬೆಂಬಲ

Last Updated 7 ಫೆಬ್ರುವರಿ 2021, 1:22 IST
ಅಕ್ಷರ ಗಾತ್ರ

ಗುಡಿಬಂಡೆ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ವಾಪಸ್‌ ಪಡೆಯುವಂತೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಒಕ್ಕೂಟದ ತೀರ್ಮಾನದಂತೆ ರೈತ ಮುಖಂಡರು ತಾಲ್ಲೂಕಿನಲ್ಲೂ ರಾಜ್ಯ ಹೆದ್ದಾರಿ ತಡೆ ನಡೆಸಿದರು.

ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಗಂಗಪ್ಪ ಮಾತನಾಡಿ, ಕೇಂದ್ರ ಸರ್ಕಾರ ಯುವಜನತೆಗೆ ರಾಮಮಂದಿರದ ಹೆಸರಲ್ಲಿ ಮಂಕುಬೂದಿ ಎರಚಿ ಅವರನ್ನು ಸೆಳೆದುಕೊಂಡು ಅಧಿಕಾರಕ್ಕೆ ಬಂದಿದೆ. ಕೆಲವೇ ದಿನಗಳಲ್ಲಿ ಬಿಜೆಪಿ ಸರ್ಕಾರದ ಬಣ್ಣ ಬಯಲಾಗಲಿದೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೇಶದಲ್ಲಿ ಭ್ರಷ್ಟಾಚಾರ, ಅರಾಜಕತೆ ತಾಂಡವವಾಡುತ್ತಿದೆ ಎಂದು ದೂರಿದರು.

ಇದೀಗ ರೈತ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಜಾರಿಗೆ ತರುವ ಮೂಲಕ ರೈತರನ್ನು ಒಳಗೊಂಡಂತೆ ಜನಸಾಮಾನ್ಯರನ್ನು ಬೀದಿಗೆ ತಳ್ಳುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಜಯರಾಮರೆಡ್ಡಿ ಮಾತನಾಡಿ, ಸುಳ್ಳು ಭರವಸೆಗಳ ಮೂಲಕ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ಬಂಡವಾಳಶಾಹಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಕಾಯ್ದೆಗಳನ್ನು ಜಾರಿಗೆ ತಂದಿದೆ. ಸಾಮಾನ್ಯ ಜನರ ಹಾಗೂ ರೈತರ ಹೊಟ್ಟೆ ಮೇಲೆ ಹೊಡೆಯುತ್ತಿದೆ ಎಂದು ಆರೋಪಿಸಿದರು.

ಸಿಪಿಎಂ ಮುಖಂಡ ಲಕ್ಷ್ಮೀನಾರಾಯಣ, ರಮಣ, ಆದಿನಾರಾಯಣ, ಮಂಜುನಾಥ್, ದಲಿತ ಸಂಘರ್ಷ ಸಮಿತಿಯ ಇಸ್ಕೂಲಪ್ಪ, ಆದಿನಾರಾಯಣಪ್ಪ, ರೈತ ಸಂಘಟನೆಯ ಮುರಳಿ, ವರದರಾಜು, ಶಿವಕುಮಾರ್ ಪ್ರತಿಭಟನೆಯಲ್ಲಿ
ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT