ಚಿಂತಾಮಣಿ: ದೇವನಹಳ್ಳಿ ತಾಲ್ಲೂಕಿನಲ್ಲಿ ರೈತರ ಭೂಸ್ವಾಧೀನ ವಿರೋಧಿಸಿ ಹೋರಾಟ ನಡೆಸುತ್ತಿದ್ದ ರೈತ ಮುಖಂಡರ ಬಂಧನ ಹಾಗೂ ಭೂಸ್ವಾಧೀನ ಕೈಬಿಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಆನಂದ್ ಮಾತನಾಡಿ, ದೇವನಹಳ್ಳಿ ತಾಲ್ಲೂಕಿನ 13 ಗ್ರಾಮಗಳಲ್ಲಿ 1775 ಎಕರೆ ಜಮೀನನ್ನು ಅವೈಜ್ಞಾನಿಕವಾಗಿ ಭೂಸ್ವಾಧೀನ ಮಾಡಿಕೊಳ್ಳಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ನೋಟಿಸ್ ನೀಡಿ ರೈತರನ್ನು ಒಕ್ಕಲೆಬ್ಬಿಸುವ ಕೆಲಸವನ್ನು ಮಾಡಿದ್ದರು.

ಅಂದಿನಿಂದಲೂ 13 ಹಳ್ಳಿಗಳ ರೈತರು ಸತತವಾಗಿ 1080 ದಿನಗಳಿಂದ ವಿವಿಧ ಹಂತಗಳಲ್ಲಿ ಹೋರಾಟ ನಡೆಸುತ್ತಿದ್ದಾರೆ. ದೇವನಹಳ್ಳಿ ತಾಲ್ಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ, ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದ್ದರು. ಸಚಿವರು, ಸರ್ಕಾರಕ್ಕೆ ಅನೇಕ ಬಾರಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ.

ಮುಖಂಡರಾದ ಲಕ್ಷ್ಮೀನಾರಾಯಣರೆಡ್ಡಿ, ರಾಜಕುಮಾರ್, ಅಂಗನವಾಡಿ ನೌಕರರು, ಬಿಸಿಯೂಟ ನೌಕರರು, ಕಾರ್ಮಿಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.