ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅಧಿಸೂಚನೆಯಂತೆ ಜಿಲ್ಲೆಯಲ್ಲಿ 2025ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಜಿಲ್ಲೆಯಲ್ಲಿ ಆಯಾ ತಾಲ್ಲೂಕುವಾರು ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯಿತಿ ಮಟ್ಟಕ್ಕೂ ಹಾಗೂ ಇತರೆ ಬೆಳೆಗಳನ್ನು ಹೋಬಳಿ ಮಟ್ಟದಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

ಮುಂಗಾರು ಹಂಗಾಮಿನಲ್ಲಿ ಜಿಲ್ಲೆ 7 ಬೆಳೆಗಳಾದ ಭತ್ತ, ನೆಲಗಡಲೆ, ಮುಸುಕಿನ ಜೋಳ, ರಾಗಿ, ಹುರುಳಿ, ತೊಗರಿ ಮತ್ತು ಟೊಮೆಟೊ ಬೆಳೆಗಳನ್ನು ಅಧಿಸೂಚಿಸಿದೆ.

ಪ್ರಕೃತಿ ವಿಕೋಪಗಳಾದ ಹೆಚ್ಚಿನ ಮಳೆ, ನೆರೆ, ಪ್ರವಾಹ, ಬೆಳೆ ಮುಳುಗಡೆ, ದೀರ್ಘಕಾಲದ ತೇವಾಂಶ ಕೊರತೆ, ತೀವ್ರ ಬರಗಾಲ ಇವುಗಳಿಂದ ಉಂಟಾಗುವ ನಷ್ಟದ ನಿರ್ಧಾರಣೆಯನ್ನು ವೈಯಕ್ತಿಕವಾಗಿ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ಇತ್ಯರ್ಥಪಡಿಸಲು ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ.

ಬೆಳೆ ಸಾಲ ಪಡೆದ ಮತ್ತು ಬೆಳೆ ಸಾಲ ಪಡೆಯದ ರೈತರು ಬೆಳೆ ವಿಮೆಯಡಿ ಒಳಪಡುವುದು ಐಚ್ಚಿಕವಾಗಿರುತ್ತದೆ. ಬೆಳೆ ಸಾಲ ಪಡೆದ ರೈತರು ಅವರ ಬೆಳೆಯನ್ನು ವಿಮೆಯಿಂದ ಕೈಬಿಡಲು, ಸೇರಿಸಲು ಘೋಷಣಾ ಪತ್ರ ನೀಡಬೇಕು.

ವಿಮಾ ಕಂತನ್ನು ತಮ್ಮ ಗ್ರಾಮ ವ್ಯಾಪ್ತಿಯ ರಾಷ್ಟ್ರೀಕೃತ, ಸಹಕಾರಿ ಬ್ಯಾಂಕ್ಗಳಲ್ಲಿ, ಗ್ರಾಮ ಒನ್ ಕೇಂದ್ರಗಳಲ್ಲಿ, ಸಾಮಾನ್ಯ ಸೇವಾ ಕೇಂದ್ರಗಳಲ್ಲಿ, ಮತ್ತು ಧರ್ಮಸ್ಥಳ ಗ್ರಾಮೀಣ ಅಭಿವೃದ್ದಿ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ವಿಮಾ ಮೊತ್ತ ಪಾವತಿಸಿ ನೋಂದಾಯಿಸಿಕೊಳ್ಳಬೇಕು.

ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.