ಸೋಮವಾರ, ಜನವರಿ 20, 2020
18 °C

ನೂತನ ಪದಾಧಿಕಾರಿಗಳಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಕ್ಕಬಳ್ಳಾಪುರ: ಬಿಜೆಪಿಯ ಗ್ರಾಮಾಂತರ ಮಂಡಲದ ನೂತನ ಅಧ್ಯಕ್ಷ ಕೃಷ್ಣಾರೆಡ್ಡಿ ಮತ್ತು ನಗರ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್‌ ಅವರನ್ನು ಬಿಜೆಪಿ ಯುವ ಮೋರ್ಚಾ ವತಿಯಿಂದ ಸನ್ಮಾನಿಸಲಾಯಿತು.

ಈ ವೇಳೆ ಮಾತನಾಡಿದ ಶ್ರೀನಿವಾಸ್, ‘ನನ್ನ ಸೇವೆಯನ್ನು ಗುರುತಿಸಿ ಪಕ್ಷದ ವರಿಷ್ಠರು ದೊಡ್ಡ ಜವಾಬ್ದಾರಿ ಕೊಟ್ಟಿದ್ದಾರೆ. ಎಲ್ಲ ಕಾರ್ಯಕರ್ತರನ್ನು ಒಟ್ಟಿಗೆ ಕರೆದ್ಯೊಯುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡುತ್ತೇನೆ. ಮುಂದಿನ ದಿನಗಳಲ್ಲಿ ಪಕ್ಷದ ಎಲ್ಲಾ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗುತ್ತದೆ. ಸ್ಥಳೀಯ ಸಮಸ್ಯೆಗಳ ಬಗ್ಗೆ ಪಕ್ಷದ ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚಿಸಿ ಪರಿಹಾರ ಕಲ್ಪಿಸಲು ಶ್ರಮಿಸುವೆ. ಮುಂಬರುವ ನಗರಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಬಿಜೆಪಿ ಸದಸ್ಯರನ್ನು ಗೆಲ್ಲಿಸುತ್ತೇವೆ’ ಎಂದು ತಿಳಿಸಿದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಸಿ.ಬಿ ಕಿರಣ್, ನಗರ ಘಟಕದ ಅಧ್ಯಕ್ಷ ಮಧುಚಂದ್ರ, ರೈತ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ರಾಮಿ ರೆಡ್ಡಿ, ಮುಖಂಡರಾದ ಎಸ್ಆರ್‌ಎಸ್ ದೇವರಾಜ್, ಸಂದೀಪ್, ಪ್ರವೀಣ್, ಮನೋಜ್, ಬಾಲು, ರಾಜೇಶ್ ಹಾಜರಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು