ಸೋಮವಾರ, ಜನವರಿ 17, 2022
18 °C

ಚಿಂತಾಮಣಿ: ಜಾನಪದ ಗಾಯನ ಕಾರ್ಯಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಿಂತಾಮಣಿ: ತಾಲ್ಲೂಕಿನ ಬಟ್ಲಹಳ್ಳಿಯ ಸರ್ಕಾರಿ ಪದವಿಪೂರ್ವ ಕಾಲೇಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶುಕ್ರವಾರ ಕಾಲೇಜಿನಲ್ಲಿ ಜಾನಪದ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನೂ ನಡೆಸಿ ವಿಜೇತರಿಗೆ ಬಹುಮಾನ ನೀಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜಕತ್ವದಲ್ಲಿ ಸಿದ್ಧಾರ್ಥ ಯುವಜನ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಸ್ಥೆಯ ಕಲಾವಿದರು ಜಾನಪದ ಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.

ಬಟ್ಲಹಳ್ಳಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅರವಿಂದ್ ಮಾತನಾಡಿ, ವಿದ್ಯಾರ್ಥಿಗಳು ಕಷ್ಟಪಟ್ಟು ವ್ಯಾಸಂಗ ಮಾಡುವುದರ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಭವಿಷ್ಯದಲ್ಲಿ ಉನ್ನತ ಸ್ಥಾನಮಾನ ಪಡೆದು ಸಮಾಜಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಜಾನಪದ ಕಲಾವಿದ ಗೊಲ್ಲಹಳ್ಳಿ ನಾರಾಯಣಸ್ವಾಮಿ, ಜಾನಪದ ಕಲೆಗಳ ಬಗ್ಗೆ ಯುವಕರು ತರಬೇತಿ ಪಡೆದುಕೊಳ್ಳಬೇಕು. ವಿಶೇಷವಾಗಿ ಗ್ರಾಮೀಣ ಜನರ ಬದುಕು, ನೋವು, ನಲಿವುಗಳನ್ನು ಪ್ರತಿಬಿಂಬಿಸುವ ಜಾನಪದ ಸೊಗಡನ್ನು ಮುಂದಿನ ಪೀಳಿಗೆಗೆ ಉಳಿಸಬೇಕು ಎಂದರು.

ಕಾಲೇಜಿನ ಇತಿಹಾಸ ಉಪನ್ಯಾಸಕಿ ಪ್ರೇಮಸುಧಾ ಮಾತನಾಡಿ, ಟಿ.ವಿ ಮತ್ತು ಸಿನಿಮಾ ಮೋಹಕ್ಕೆ ಯುವಜನತೆ ಬಲಿಯಾಗುತ್ತಿದ್ದಾರೆ. ಈ ಚಟದಿಂದ ದೂರ ಬರಲು ಜಾನಪದ ಕಲೆಗಳನ್ನು ಕಲಿಯಲು ಮುಂದಾಗಬೇಕು ಎಂದು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲ ಎಂ.ಸಿ. ಪ್ರಸಾದ್ ಅಧ್ಯಕ್ಷತೆವಹಿಸಿದ್ದರು. ವಾಣಿಜ್ಯಶಾಸ್ತ್ರದ ಉಪನ್ಯಾಸಕ ಆನಂದರೆಡ್ಡಿ ಮಾತನಾಡಿದರು. ಉಪನ್ಯಾಸಕರಾದ ಬಿ.ಕೆ. ರವಿ, ಸಿ.ಎಸ್. ಶಿಲ್ಪಶ್ರೀ, ಕಲಾವಿದ ಮಂಜುನಾಥ, ಗೊಲ್ಲಹಳ್ಳಿ ಕೃಷ್ಣಪ್ಪ, ಎಸ್. ಶ್ರೀನಿವಾಸ್, ಕೆ. ಸೀನಪ್ಪ, ರಾಮಸ್ವಾಮಿ ಮತ್ತು ಮುನಿನಾರಾಯಣಪ್ಪ ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು