ಚಿಕ್ಕಬಳ್ಳಾಪುರ: ನಗರದ ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗ ನಿರ್ಮಿಸಲು ಅನುದಾನ ಮಂಜೂರು ಮಾಡುವಂತೆ ನಗರ ಭೂಸಾರಿಗೆ ನಿರ್ದೇಶನಾಲಯದ ಆಯುಕ್ತರಿಗೆ ಚಿಕ್ಕಬಳ್ಳಾಪುರ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ಸದಸ್ಯ ಡಿ.ಎಸ್.ಆನಂದ ರೆಡ್ಡಿ ನೇತೃತ್ವದ ನಿಯೋಗ ಕಳೆದ ತಿಂಗಳು ಮನವಿ ಸಲ್ಲಿಸಿತ್ತು.

ಈ ಕೋರಿಕೆ ಹಿನ್ನೆಲೆಯಲ್ಲಿ ಮಂಗಳವಾರ ನಗರ ಭೂಸಾರಿಗೆ ನಿರ್ದೇಶನಾಲಯದ ಎಂಜಿನಿಯರ್ಗಳು ನಗರದ ಬಿ.ಬಿ ರಸ್ತೆ, ಬಲಮುರಿ ವೃತ್ತ ಹಾಗೂ ಜಿಲ್ಲಾ ಆಸ್ಪತ್ರೆಯ ರಸ್ತೆಯನ್ನು ಪರಿಶೀಲಿಸಿದರು.

ಚಿಕ್ಕಬಳ್ಳಾಪುರವು ಜಿಲ್ಲಾ ಕೇಂದ್ರ ಸ್ಥಾನವಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಾಂದ್ರತೆ ಹೆಚ್ಚಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೂ ತೊಂದರೆ ಆಗಿದೆ. ಪ್ರಮುಖ ರಸ್ತೆಗಳಲ್ಲಿ ಪಾದಚಾರಿ ಮಾರ್ಗವಿಲ್ಲದ ಕಾರಣ ಅಪಘಾತಗಳೂ ಸಂಭವಿಸುತ್ತಿವೆ.

ಬಿ.ಬಿ ರಸ್ತೆಯ ರೈಲ್ವೆ ಗೇಟ್ನಿಂದ ಶನಿಮಹಾತ್ಮ ದೇಗುಲದವರೆಗಿನ ಎರಡೂ ಕಡೆ ಪಾದಚಾರಿ ಮಾರ್ಗ ಮತ್ತು ಚರಂಡಿ ನಿರ್ಮಿಸಬೇಕು. ಬಲಮುರಿ ವೃತ್ತದಿಂದ ರೈಲ್ವೆ ನಿಲ್ದಾಣವರೆಗೆ, ಎಂ.ಜಿ ರಸ್ತೆಯಿಂದ ಸರ್ಕಾರಿ ಆಸ್ಪತ್ರೆಯ ರಸ್ತೆಯ ಎರಡೂ ಬದಿ ಪಾದಚಾರಿ ಮಾರ್ಗ ನಿರ್ಮಿಸಬೇಕು ಎಂದು ನಗರಸಭೆ ಸದಸ್ಯರು ಕಳೆದ ತಿಂಗಳು ಮನವಿ ಸಲ್ಲಿಸಿದ್ದರು.

ಈ ಮೂರು ಕಡೆಗಳಲ್ಲಿ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಯಾವ ಸ್ಥಳ ಹೇಗಿದೆ. ಈಗ ಆಗುತ್ತಿರುವ ತೊಂದರೆಗಳು ಏನು? ಚರಂಡಿ ನಿರ್ಮಿಸಿದರೆ ಯಾವ ರೀತಿ ಅನುಕೂಲ ಆಗಲಿದೆ. ಪಾದಚಾರಿ ಮಾರ್ಗ ಎಲ್ಲಿ ನಿರ್ಮಿಸಬೇಕು ಎನ್ನುವು ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಡಿ.ಎಸ್.ಆನಂದರೆಡ್ಡಿ ಬಾಬು ನಿಯೋಗಕ್ಕೆ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು. ನಗರ ಭೂಸಾರಿಗೆ ನಿರ್ದೇಶನಾಲಯದ ಅಧಿಕಾರಿಗಳಾದ ವಿಶ್ವೇಶ್, ಶ್ರುತಿ, ನಗರಸಭೆ ಎಇಇ ರಘು, ಎಇ ಅರುಣ್ ಪರಿಶೀಲನೆ ನಡೆಸಿದರು.

‘ನಾನು ಅಧ್ಯಕ್ಷನಾಗಿದ್ದ ವೇಳೆ ನಗರದ ಐದು ಕಡೆಗಳಲ್ಲಿ ಪಾದಚಾರಿ ಮಾರ್ಗ, ಚರಂಡಿ ನಿರ್ಮಿಸುವಂತೆ ನಗರ ಭೂಸಾರಿಗೆ ನಿರ್ದೇಶನಾಲಯಕ್ಕೆ ಪ್ರಸ್ತಾವ ಸಲ್ಲಿಸಿದ್ದೆವು. ಆ ಪ್ರಕಾರ ಎರಡು ಕಡೆಗಳಲ್ಲಿ ಕಾಮಗಾರಿ ನಡೆಸಿದ್ದರು. ಆದರೆ ಉಳಿದ ಮೂರು ಕಡೆಗಳಲ್ಲಿ ಕಾಮಗಾರಿಗಳು ನಡೆದಿರಲಿಲ್ಲ. ಈ ಬಗ್ಗೆ ಕಳೆದ ತಿಂಗಳು ಮತ್ತೆ ಮನವಿ ಮಾಡಿದ್ದೆವು’ ಎಂದು ಡಿ.ಎಸ್.ಆನಂದರೆಡ್ಡಿ ಬಾಬು ಸುದ್ದಿಗಾರರಿಗೆ ತಿಳಿಸಿದರು.

ಅಗಲಗುರ್ಕಿ ಮುಂಭಾಗದಿಂದ ಶನಿಮಹಾತ್ಮ ದೇಗುಲದವರೆಗೆ ರಸ್ತೆ ವಿಸ್ತರಣೆ ಕಾಮಗಾರಿ ಕೈಗೊಳ್ಳಬೇಕು. ಈ ರಸ್ತೆಯ ಎರಡೂ ಬದಿಗಳಲ್ಲಿ ಚರಂಡಿ ನಿರ್ಮಿಸಬೇಕು. ಈಗ ಇರುವ ರಸ್ತೆಯು ಕಿರಿದಾಗಿದೆ. ಮಳೆ ಬಂದರೆ ರಸ್ತೆ ಎರಡೂ ಬದಿ ನೀರು ನಿಲ್ಲುತ್ತಿದೆ. ಇದರಿಂದ ರೈತರು, ವಿದ್ಯಾರ್ಥಿಗಳು ಸೇರಿದಂತೆ ಎಲ್ಲ ವರ್ಗದ ಜನರಿಗೆ ತೊಂದರೆ ಆಗುತ್ತಿದೆ ಎಂದು ಹೇಳಿದರು.

ರಸ್ತೆ, ಪಾದಚಾರಿ ಮಾರ್ಗ ನಿರ್ಮಾಣದಿಂದ ಅಪಘಾತಗಳು ತಗ್ಗುತ್ತವೆ. ಸುಗಮ ಸಂಚಾರಕ್ಕೂ ಅವಕಾಶವಾಗುತ್ತದೆ. ನಗರಕ್ಕೂ ಅಂದ ಬರುತ್ತದೆ. ಈ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್ ಅವರು ಮುತುವರ್ಜಿ ವಹಿಸಬೇಕು ಎಂದು ಕೋರಿದರು.

ನಗರಸಭೆ ಸದಸ್ಯರಾದ ಸತೀಶ್, ಯತೀಶ್, ಮುಖಂಡ ತೇಜೇಂದ್ರ, ಮುನಿರಾಜು ಮತ್ತಿತರರು ಈ ವೇಳೆ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.