ಚಿಕ್ಕಬಳ್ಳಾಪುರ: ನಗರ ಹೊರವಲಯದ ಚದುಲಪುರ ಕ್ರಾಸ್ ನಲ್ಲಿ ಗುರುವಾರ ಬೆಳಿಗ್ಗೆ ಕಂಟೈನರ್ ಲಾರಿಯೊಂದು ಹೆದ್ದಾರಿ ಬದಿ ನಿಂತಿದ್ದ ಎರಡು ಕಾರು, ಒಂದು ಬೈಕ್‌ಗೆ ಡಿಕ್ಕಿ ಹೊಡೆದು ಹೊಟೇಲ್‌ಗೆ ನುಗ್ಗಿದ ಘಟನೆಯಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಸ್ವಿಫ್ಟ್ ಕಾರಿನಲ್ಲಿದ್ದ ಗವಿಗಾನಹಳ್ಳಿ ನಿವಾಸಿಗಳಾದ ವಕೀಲ ಯಮುನಾಚಾರ್ (44), ಚಿಕ್ಕಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (ಟಿಎಪಿಸಿಎಂಎಸ್) ಗುಮಾಸ್ತ ಎಚ್.ವಿ.ವೆಂಕಟೇಶ್ (45), ಟಾಟಾ ನೆಕ್ಸಾನ್ ಕಾರಿನಲ್ಲಿದ್ದ ಬೆಂಗಳೂರಿನ ಬಾಣಸವಾಡಿ ನಿವಾಸಿ ಕಲಾಂಜಿಯಂ (47), ದೊಡ್ಡಬಳ್ಳಾಪುರ ತಾಲ್ಲೂಕಿನ ಲಿಂಗಪುರದ ನಿವಾಸಿ ನಿತೇಶ್ ಗೌಡ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹರಿಯಾಣ ಮೂಲದ ಕಂಟೈನರ್ ಲಾರಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಬೆಂಗಳೂರಿನಿಂದ ಹೈದರಾಬಾದ್ ನತ್ತ ಹೊರಟಿದ್ದ ವೇಳೆ ಈ ಅವಘಡ ಸಂಭವಿಸಿದೆ. ಘಟನೆಯಲ್ಲಿ 6 ಜನರು ಗಾಯಗೊಂಡಿದ್ದು, ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದರು.
ಲಾರಿ ಚಾಲಕನನ್ನು ವಶಕ್ಕೆ ಪಡೆದಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.