ಸಂವಿಧಾನದಿಂದ ದೇಶ ಪ್ರಗತಿಯತ್ತ: ಶಾಸಕ ಎಸ್.ಎನ್ ಸುಬ್ಬಾರೆಡ್ಡಿ

ಗುಡಿಬಂಡೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಗುರುವಾರ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ 74ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು.
ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಮಾತನಾಡಿದರು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇಂಗ್ಲೀಷ್ ಉಪನ್ಯಾಸಕ ವೆಂಕಟರಾಮು ಮಾತನಾಡಿ, ‘1950ರ ಜ. 26ರಂದು ತನ್ನದೇ ಸಂವಿಧಾನ ಜಾರಿಗೊಳಿಸಿಕೊಳ್ಳುವ ಮೂಲಕ ಭಾರತವು ಗಣತಂತ್ರವಾಯಿತು. ಇದು ಭಾರತೀಯರಿಗೆ ಮಹತ್ವದ ದಿನವಾಗಿದೆ. ಸ್ವಾತಂತ್ರ್ಯಕ್ಕಾಗಿ ತಮ್ಮನ್ನು ಅರ್ಪಿಸಿಕೊಂಡ ದೇಶ ಪ್ರೇಮಿಗಳು ಹಾಗೂ ನಾಯಕರ ತ್ಯಾಗ ಬಲಿದಾನಗಳನ್ನು ನಾವು ಸ್ಮರಿಸಬೇಕು’ ಎಂದರು.
ಶಾಲಾ ವಿದ್ಯಾರ್ಥಿಗಳಿಂದ ಕೋಲಾಟ, ವಿವಿಧ ಬಗೆಯ ದೇಶ ಭಕ್ತಿ ನೃತ್ಯಗಳು ನೆರೆದಿದ್ದವರನ್ನು ರಂಜಿಸಿದವು. ಗಣರಾಜ್ಯೋತ್ಸವದಲ್ಲಿ ದರಖಾಸ್ತು ಸಭೆಯಲ್ಲಿ ಆಯ್ಕೆಯಾಗಿದ್ದ ಪಲಾನುಭವಿಗಳಿಗೆ ಸಾಗುವಳಿ ಚೀಟಿ ವಿತರಿಸಲಾಯಿತು. ವೇದಿಕೆ ಕಾರ್ಯಕ್ರಮಕ್ಕೆ ಮುನ್ನ ಧ್ವಜರೋಹಣ, ವಿದ್ಯಾರ್ಥಿಗಳಿಂದ ಬ್ಯಾಂಡ್ ಸೆಟ್ ಪಥಸಂಚಲನ ನಡೆಯಿತು.
ತಹಶಿಲ್ದಾರ್ ಸಿಗ್ಬತ್‌ಉಲ್ಲಾ, ಪ. ಪಂ ಅಧ್ಯಕ್ಷೆ ಬಷೀರಾ ರಿಜ್ವಾನ್, ಉಪಾಧ್ಯಕ್ಷ ಜಿ.ಎಂ. ಅನಿಲ್ ಕುಮಾರ್, ಮುಖ್ಯಾಧಿಕಾರಿ ಸಬಾ ಶಿರೀನ್, ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿ ಮುನೇಗೌಡ, ಸಿ.ಎಂ. ಅನಿಲ್ ಕುಮಾರ್, ತಾ.ಪಂ ಇಒ ಬಿಂದು , ಆರಕ್ಷಕ ಉಪ ನಿರೀಕ್ಷಕ ನಾಗರಾಜ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುಬ್ಬರಾಯಪ್ಪ ಹಂಪಸಂದ್ರ, ಗ್ರಾ. ಪಂ ಅಧ್ಯಕ್ಷ ಲಕ್ಷ್ಮಿನಾರಾಯಣ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.