ಗಾಂಧಿ ತತ್ವಾದರ್ಶ ಇಂದಿನ ಅಗತ್ಯ

7
ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ವಾರ್ತಾ ಇಲಾಖೆಯಿಂದ ಗಾಂಧೀಜಿ ಸ್ತಬ್ಧಚಿತ್ರ ಅಭಿಯಾನ

ಗಾಂಧಿ ತತ್ವಾದರ್ಶ ಇಂದಿನ ಅಗತ್ಯ

Published:
Updated:
Deccan Herald

ಚಿಕ್ಕಬಳ್ಳಾಪುರ: ‘ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಚಿಂತನೆ ಇಂದಿಗೂ ಪ್ರಸ್ತುತ. ಅವರ ಆದರ್ಶ ಮೌಲ್ಯಗಳನ್ನು ಮಕ್ಕಳು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ದೇಶದ ಉತ್ತಮ ಪ್ರಜೆಯಾಗಿ ಬದುಕಬೇಕು’ ಎಂದು ನಗರಸಭೆ ಅಧ್ಯಕ್ಷ ಎಂ.ಮುನಿಕೃಷ್ಣ ಹೇಳಿದರು.

ನಗರಕ್ಕೆ ಗುರುವಾರ ಆಗಮಿಸಿದ್ದ ಮಹಾತ್ಮ ಗಾಂಧೀಜಿಯವರ 150ನೇ ಜನ್ಮ ವರ್ಷಾಚರಣೆಯ ಅಂಗವಾಗಿ ವಾರ್ತಾ ಇಲಾಖೆ ಆಯೋಜಿಸಿರುವ ಗಾಂಧೀಜಿ ಸ್ತಬ್ಧಚಿತ್ರ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಅಹಿಂಸೆ ಮಾರ್ಗದಲ್ಲಿ ನಾವು ಏನಾದರೂ ಸಾಧಿಸಬಹುದು ಎಂಬ ಸಂದೇಶವನ್ನು ಗಾಂಧಿ ಸಮಾಜಕ್ಕೆ ನೀಡಿದರು. ಜತೆಗೆ ದೇಶದ ಸೇವೆಗೆ ತಮ್ಮ ಜೀವನವನ್ನೇ ಮುಡುಪಾಗಿಟ್ಟರು. ಅಂತಹ ಮಹಾತ್ಮನ ಬಗ್ಗೆ ಸ್ತಬ್ಧಚಿತ್ರದ ಅಭಿಯಾನದ ಮೂಲಕ ನಾಗರಿಕರಲ್ಲಿ ಅರಿವು ಮೂಡಿಸುತ್ತಿರುವುದು ಶ್ಲಾಘನೀಯ’ ಎಂದರು.

ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಿಂದ ಆರಂಭಗೊಂಡ ಸ್ತಬ್ಧಚಿತ್ರದ ಯಾತ್ರೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. ತಹಶೀಲ್ದಾರ್ ನರಸಿಂಹಮೂರ್ತಿ, ನಗರಸಭೆ ಆಯುಕ್ತ ಉಮಾಕಾಂತ್,ಕ್ಷೇತ್ರ ಶಿಕ್ಷಣಾಧಿಕಾರಿ ಶಾಂತಲಾ, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ ಉಪಸ್ಥಿತರಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !