ಶನಿವಾರ, ಅಕ್ಟೋಬರ್ 24, 2020
24 °C

ಈ–ತಿಮ್ಮಸಂದ್ರಕ್ಕೆ ಗಾಂಧಿ ಗ್ರಾಮ ಪುರಸ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶಿಡ್ಲಘಟ್ಟ: ತಾಲ್ಲೂಕಿನ ಈ-ತಿಮ್ಮಸಂದ್ರ ಗ್ರಾಮ ಪಂಚಾಯಿತಿ 2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿದೆ.

ಸ್ವಚ್ಛತೆ, ನೈರ್ಮಲ್ಯ, ಕಂದಾಯ ವಸೂಲಿ ಸೇರಿದಂತೆ ವಿವಿಧ ಯೋಜನೆಗಳ ಅನುಷ್ಠಾನ ಪರಿಗಣಿಸಿ ಗಾಂಧಿ ಗ್ರಾಮ ಪುರಸ್ಕಾರ ನೀಡಲಾಗುತ್ತದೆ.

2019-20ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರದ ಆಯ್ಕೆ ಸ್ಪರ್ಧೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮೊದಲ ಐದು ಪಂಚಾಯಿತಿಗಳಲ್ಲಿ ತಾಲ್ಲೂಕಿನ ಹೊಸಪೇಟೆ, ಕುಂದಲಗುರ್ಕಿ, ಕುಂಭಿಗಾನಹಳ್ಳಿ, ಚೀಮಂಗಲ ಹಾಗೂ ಈ-ತಿಮ್ಮಸಂದ್ರ ಗ್ರಾಮ ಪಂಚಾಯಿತಿಗಳಿದ್ದವು. ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ, ಯೋಜನೆ ಅನುಷ್ಠಾನದ ಪ್ರಗತಿ ಅವಲೋಕಿಸಿ ನಿರ್ದಿಷ್ಟ ಮಾನದಂಡಗಳ ಅಂಕಗಳಿಕೆಯನ್ನಾಧರಿಸಿ ಈ ತಿಮ್ಮಸಂದ್ರ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.