ಚಿಕ್ಕಬಳ್ಳಾಪುರ: ಆಂಧ್ರಪ್ರದೇಶದ ಮದನಪಲ್ಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 154 ಕೆ.ಜಿ ಗಾಂಜಾವನ್ನು ಚಿಂತಾಮಣಿ ನಗರದ ಬಳಿ ಚಿಕ್ಕಬಳ್ಳಾಪುರ ಸಿಇಎನ್ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದಿರುವ ಗಾಂಜಾದ ಒಟ್ಟು ಮೌಲ್ಯ ₹ 45 ಲಕ್ಷ ಎಂದು ಅಂದಾಜಿಸಲಾಗಿದೆ.
ಪ್ರಕರಣ ಸಂಬಂಧ ಮದನಪಲ್ಲಿಯ ಚಂದ್ರ ನಗರದ ಶ್ರೀರಾಮುಲು (27) ಎಂಬಾತನನ್ನು ಬಂಧಿಸಲಾಗಿದೆ.
ಆರೋಪಿ ಶ್ರೀರಾಮುಲು ಗೃಹೋಪಯೋಗಿ ವಸ್ತುಗಳ ಮಾರಾಟಗಾರನ ಸೋಗಿನಲ್ಲಿ ಗಾಂಜಾ ಸಾಗಿಸುತ್ತಿದ್ದ.
ಗೂಡ್ಸ್ ಆಟೊದ ಒಂದು ಬದಿಯಲ್ಲಿ ಗೃಹೋಪಯೋಗಿ ವಸ್ತುಗಳನ್ನು ಇಟ್ಟು ಅದರ ಕೆಳಗೆ ಗಾಂಜಾ ಸೊಪ್ಪು ಇರಿಸಲಾಗಿತ್ತು.
ಸಿಇಎನ್ ಠಾಣೆ ಪೊಲೀಸರಿಗೆ ದೊರೆತ ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.