ಗೌರಿಬಿದನೂರು: ತಾಲ್ಲೂಕಿನ ಬೈಚಾಪುರ ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿಯನ್ನು ಸೋಮವಾರ ಅದ್ದೂರಿಯಾಗಿ ಆಚರಿಸಲಾಯಿತು.

ಅಂಬೇಡ್ಕರ್ ಪುತ್ಥಳಿಗೆ ಪುಷ್ಪ ನಮನ ಸಲ್ಲಿಸಿ, ಭಾವಚಿತ್ರವನ್ನು ಬೆಳ್ಳಿರಥದಲ್ಲಿ ಊರಿನ ರಾಜಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ನಂಜುಂಡಪ್ಪ ಮಾತನಾಡಿ, ಅಂಬೇಡ್ಕರ್ ಭಾರತದ ಮಹಾನ್ ನಾಯಕ. ಅವರು ಸಮಾಜ ಸುಧಾರಕರಾಗಿದ್ದರು. ದಲಿತರು ಮತ್ತು ಹಿಂದುಳಿದವರಿಗೆ ಶಿಕ್ಷಣ ಕೊಡಿಸುವ ಜೊತೆಗೆ ಅವರನ್ನು ಸಮಾಜದ ಮುಖ್ಯವಾಹಿನಿಗೆ ತರುವುದೇ ಅವರ ಉದ್ದೇಶವಾಗಿತ್ತು ಎಂದು ಹೇಳಿದರು.

ಎಲ್ಲಾ ವರ್ಗದವರಿಗೆ ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅವರು ಬರೆದ ಸಂವಿಧಾನವು ಎಲ್ಲ ಜನರಿಗೆ ಹಕ್ಕುಗಳನ್ನು ನೀಡಿದೆ ಎಂದು ಹೇಳಿದರು..

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-16-547609666

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.