ಗೌರಿಬಿದನೂರು: ತಾಲ್ಲೂಕಿನಾದ್ಯಂತ ಕ್ರೈಸ್ತ ಸಮುದಾಯದವರು ಗುರುವಾರ ಶ್ರದ್ಧಾ-ಭಕ್ತಿಯಿಂದ ಕ್ರಿಸ್ಮಸ್ ಆಚರಿಸಿದರು. ಶಾಂತಿಧೂತ ಯೇಸುವನ್ನು ಸ್ಮರಿಸಿ ಪ್ರಾರ್ಥನೆ ಸಲ್ಲಿಸಿದರು.

ಚರ್ಚ್ಗಳಲ್ಲಿ ಪ್ರಾರ್ಥನೆ, ಕ್ರಿಸ್ಮಸ್ ಗೀತೆಗಳ ಗಾಯನ, ಮನೆಗಳಲ್ಲಿ ಯೇಸುವಿನ ಸ್ಮರಣೆ ಮಾಡಲಾಯಿತು. ಕೇಕ್ ಹಾಗೂ ಸಿಹಿತಿಂಡಿ ಹಂಚುವ ಮೂಲಕ ಪರಸ್ಪರ ಶುಭಾಶಯ ಕೋರಲಾಯಿತು.

ಮಕ್ಕಳು ಸಾಂತಾಕ್ಲಾಸ್ ವೇಷ ಧರಿಸಿ ಸಂಭ್ರಮಿಸಿದರು. ಹಬ್ಬದ ಪ್ರಯುಕ್ತ ಚರ್ಚ್ಗಳನ್ನು ವಿಶೇಷವಾಗಿ ದೀಪಾಲಂಕಾರ ಮಾಡಲಾಗಿತ್ತು. ಬುಧವಾರ ರಾತ್ರಿಯಿಂದ ಚರ್ಚ್ಗಳಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡಿದ್ದವು.

ಗುರುವಾರ ಬೆಳಗ್ಗೆ ಕುಟುಂಬ ಸದಸ್ಯರೊಂದಿಗೆ ಚಚ್ರ್ಗಳಿಗೆ ತೆರಳಿದ ಕ್ರೈಸ್ತರು ಯೇಸು ಕ್ರಿಸ್ತನ ಶಿಲುಬೆ ಎದುರು ನಿಂತು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಮನೆಯಲ್ಲಿ ಹೊಸ ಬಟ್ಟೆ ತೊಟ್ಟು, ಹಾಡು ಹೇಳಿ ಹಬ್ಬ ಆಚರಿಸಿದರು. ಮನೆಗಳಲ್ಲಿ ಕ್ರಿಸ್ಮಸ್ ಟ್ರಿ ಹಾಗೂ ನಕ್ಷತ್ರ ಆಕೃತಿಯ ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು. ನಗರದ ಸಿಎಸ್ಐ ಗರ್ನಿ ಮೆಮೊರಿಯಲ್ ಚರ್ಚ್, ಉಡಮಲೋಡು, ಹಿರೇಬಿದನೂರು ಸೇರಿದಂತೆ ಎಲ್ಲ ಚರ್ಚೆಗಳಲ್ಲಿ ಹಬ್ಬದ ಪ್ರಯುಕ್ತ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು.

ಬಹುತೇಕ ಚರ್ಚ್ಗಳಲ್ಲಿ ಯೇಸು ಹುಟ್ಟಿದಾಗಿನಿಂದ ಹಿಡಿದು ಶಿಲುಬೆಗೆ ಏರಿಸುವ ತನಕ ಸಾಗಿಬಂದ ಬದುಕಿನ ಕಥನ ಹೇಳುವ ಗೋದಲಿ ನಿರ್ಮಾಣ ಮಾಡಲಾಗಿತ್ತು. ಅವುಗಳಿಗೆ ಬಣ್ಣಬಣ್ಣದ ದೀಪಗಳಿಂದ ಅಲಂಕಾರ ಮಾಡಲಾಗಿತ್ತು. ಮಕ್ಕಳು ಗೋದಲಿಗಳ ಸುತ್ತ ಸುತ್ತಾಡಿ ಸಂಭ್ರಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.