ಗೌರಿಬಿದನೂರು: ಕಾಂಗ್ರೆಸ್ ಪಕ್ಷದ ಕಚೇರಿಗೆ ನಿವೇಶನ ಮಂಜೂರು ಮಾಡಲಾಗಿದ್ದು, ನಗರದ ಬೈಪಾಸ್ ರಸ್ತೆಯ ಪಕ್ಕದಲ್ಲಿರುವ ಹಿರೇಬಿದನೂರು ಬಳಿ ಕಾಂಗ್ರೆಸ್ ಭವನಕ್ಕೆ ಸುಮಾರು ಆರು ಸಾವಿರ ಚದರ ಅಡಿ ವಿಸ್ತೀರ್ಣದ ನಿವೇಶನ ಗುರುತಿಸಲಾಗಿದೆ ಎಂದು ಮಾಜಿ ಶಾಸಕ ಎನ್.ಎಚ್. ಶಿವಶಂಕರ ರೆಡ್ಡಿ ತಿಳಿಸಿದರು.

ನಗರದ ಹೊರವಲಯದ ಉಪನೋಂದಣಿ ಕಚೇರಿಯಲ್ಲಿ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ನಿವೇಶನ ನೊಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ ಮಾತನಾಡಿ, ರಾಜ್ಯದಾದ್ಯಂತ ಸುಮಾರು 100 ಕಾಂಗ್ರೆಸ್ ಭವನಗಳನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಿರ್ಮಿಸುವ ಯೋಜನೆ ಇದೆ. ಈ ಯೋಜನೆ ಭಾಗವಾಗಿ ಕಾಂಗ್ರೆಸ್ ಭವನ ಟ್ರಸ್ಟ್ನಿಂದ ತಾಲ್ಲೂಕಿನಲ್ಲಿ ಪಕ್ಷದ ಭವನ ನಿರ್ಮಿಸಲು ನಿವೇಶನವನ್ನು ಪಕ್ಷದ ಪರವಾಗಿ ನೋಂದಣಿ ಮಾಡಲಾಗಿದೆ ಎಂದು ತಿಳಿಸಿದರು.

ಭವನದ ಭೂಮಿ ಪೂಜೆ ಮೇ ತಿಂಗಳಲ್ಲಿ, ಎಐಸಿಸಿ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಗೌರಿಬಿದನೂರಷ್ಟೇ ಅಲ್ಲದೆ, ರಾಜ್ಯದ ಎಲ್ಲ ಭವನಗಳಿಗೆ ಏಕಕಾಲದಲ್ಲಿ ಶಂಕುಸ್ಥಾಪನೆ ನೆರವೇರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಎನ್.ಕೇಶವರೆಡ್ಡಿ, ಕೆಪಿಸಿಸಿ ಅಧ್ಯಕ್ಷ ಸೂಚನೆಯಂತೆ ಜಿಲ್ಲಾ ಮಟ್ಟದಲ್ಲಿ ಕಾಂಗ್ರೆಸ್ ಭವನ ಹೊಂದಿರಬೇಕು ಎಂಬ ಉದ್ದೇಶದಿಂದ ಈಗಾಗಲೇ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ನಿವೇಶನವನ್ನು ನೋಂದಾಯಿಸಲಾಗಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಂಡು, ನಾಗರಿಕ ಸೌಲಭ್ಯ ನಿವೇಶನವನ್ನು ಶೇ 5 ರಷ್ಟು ರಿಯಾಯಿತಿ ದರದಲ್ಲಿ ನೀಡಲು ಅನುಮೋದನೆ ನೀಡಿದ್ದರು. ಸರ್ಕಾರಕ್ಕೆ ಪಾವತಿಸಬೇಕಾದ ಮೊತ್ತವನ್ನು ಜಿಲ್ಲಾ ಉಸ್ತುವಾರಿ ಸಚಿವರು ವೈಯಕ್ತಿಕ ಹಣದಿಂದ ಡಿ.ಡಿ. ಮೂಲಕ ಈಗಾಗಲೇ ಪಾವತಿಸಿದ್ದಾರೆ ಎಂದು ತಿಳಿಸಿದರು.

ಕೆಪಿಸಿಸಿ ಖಜಾಂಚಿ ವಿನಯ್ ಕಾರ್ತಿಕ್ ನಿವೇಶನದ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಶೀಘ್ರದಲ್ಲೇ ಎನ್.ಎಚ್.ಶಿವಶಂಕರರೆಡ್ಡಿ ನೇತೃತ್ವದಲ್ಲಿ ಕೆಪಿಸಿಸಿ ಅಧ್ಯಕ್ಷರನ್ನು ಭೇಟಿ ಮಾಡಿ, ಕಟ್ಟಡದ ರೂಪುರೇಷೆ ಮತ್ತು ಅಂದಾಜು ಪಟ್ಟಿಯನ್ನು ಸಿದ್ಧಪಡಿಸಿ ಭವನ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಈ ಭವನವನ್ನು ಕೇವಲ ಪಕ್ಷದ ಚಟುವಟಿಕೆಗಳಿಗೆ ಮಾತ್ರವಲ್ಲದೆ, ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತಹ ವಿವಿಧ ಸಾಮಾಜಿಕ ಚಟುವಟಿಕೆಗಳಿಗೂ ಬಳಸಿಕೊಳ್ಳುವ ಉದ್ದೇಶ ಹೊಂದಲಾಗಿದೆ ಎಂದು ಹೇಳಿದರು.

ಕೆಪಿಸಿಸಿ ರಾಜ್ಯ ಖಜಾಂಚಿ ವಿನಯ್ ಕಾರ್ತಿಕ್, ಕಚೇರಿ ಕಾರ್ಯದರ್ಶಿ ಎಲ್.ನಾರಾಯಣ್, ಕಾರ್ಯದರ್ಶಿ ಶ್ರೀನಿವಾಸಲು, ಸದಸ್ಯ ಪದ್ಮರಾಜ್ ಜೈನ್ ಮುಖಂಡರಾದ ರಮೇಶ್, ಮಂಜುನಾಥ್, ವಲೀ, ನರಸಿಂಹಮೂರ್ತಿ, ನಾರಾಯಣಸ್ವಾಮಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-16-110323889

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.