ಗೌರಿಬಿದನೂರು | ನಶೆಯಲ್ಲಿ ತಮ್ಮನ ಮುಂಗೈ ಕತ್ತರಿಸಿದ ಅಣ್ಣ

ಗೌರಿಬಿದನೂರು: ತಾಲ್ಲೂಕಿನ ರಮಾಪುರ ಗ್ರಾಮದಲ್ಲಿ ಬುಧವಾರ ಪಾನಮತ್ತ ಸಹೋದರರ ಗಲಾಟೆಯಲ್ಲಿ ಅಣ್ಣ ತಮ್ಮನ ಮುಂಗೈ ಕತ್ತರಿಸಿದ್ದಾನೆ.
ಗಾಯಾಳು ಹನುಮಂತ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.
ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೈ ಕತ್ತರಿಸಿದ ಆರೋಪಿ ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ಸಿಪಿಐ ರವಿ ಹಾಗೂ ಪಿಎಸ್ಐ ಅವಿನಾಶ್ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.