ಗೌರಿಬಿದನೂರು: ನಗರದ 10ನೇ ವಾರ್ಡ್ನಲ್ಲಿ ಚರಂಡಿ ನಿರ್ಮಾಣ ಕಾಮಗಾರಿ ಕಳಪೆಯಿಂದ ಕೂಡಿದ್ದು, ಈ ಬಗ್ಗೆ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಗುಣಮಟ್ಟದ ಕಾಮಗಾರಿ ಆರಂಭಿಸಿ, ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಒತ್ತಾಯಿಸಿ ಸೋಮವಾರ ಸ್ಥಳೀಯರು ನಿವಾಸಿಗಳು ನಗರಸಭೆ ಮುಂದೆ ಪ್ರತಿಭಟನೆ ನಡೆಸಿದರು.

ತಕ್ಷಣವೇ ಕಳಪೆ ಕಾಮಗಾರಿಯನ್ನು ನಿಲ್ಲಿಸಿ, ತಜ್ಞರ ತಂಡದ ಮೂಲಕ ಪರಿಶೀಲನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡು, ಜನರ ತೆರಿಗೆ ಹಣ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು ಎಂದು ಪ್ರತಿಭಟನನಿರತರು ಆಗ್ರಹಿಸಿದರು.

ಚರಂಡಿ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ, ಕೆಲವು ಕಡೆ ಎತ್ತರ ಜಾಸ್ತಿ ಇರುವುದರಿಂದ ಚರಂಡಿ ನೀರು ಸರಾಗವಾಗಿ ಹರಿದುಹೋಗುತ್ತಿಲ್ಲ. ಕೆಲವೆಡೆ ಪೈಪ್ಗಳಲ್ಲಿ ನೀರು ಸೋರಿಕೆಯಾಗುತ್ತಿವೆ. ಅದೇ ನೀರು ನಲ್ಲಿ ಮೂಲಕ ಮನೆಗಳಿಗೆ ಸರಬರಾಜು ಆಗುತ್ತಿದೆ. ಚರಂಡಿ ಮುಚ್ಚದೆ ಇರುವುದರಿಂದ ಚರಂಡಿಯಲ್ಲಿರುವ ಹುಳುಗಳು ಮನೆಗಳಿಗೆ ನುಗ್ಗುತ್ತಿವೆ. ಚರಂಡಿ ದಾಟಿ ಮನೆಗೆ ಹೋಗಲು ವೃದ್ಧರಿಗೆ ಮತ್ತು ಮಕ್ಕಳಿಗೆ ಕಷ್ಟವಾಗುತ್ತಿದೆ. ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದರೂ ಸಹ ಸಂಬಂಧಪಟ್ಟವರು ಮಾತ್ರ ದಿವ್ಯ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ಚರಂಡಿ ಅವ್ಯವಸ್ಥೆ ಬಗ್ಗೆ ಮೂರು ಬಾರಿ ದೂರು ನೀಡಿದ್ದೇವೆ. ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ. ಪ್ರತಿನಿತ್ಯ ಹುಳುಗಳು ಚರಂಡಿ ಮೂಲಕ ಮನೆಗೆ ಬರುತ್ತವೆ. ಕೊಳಚೆ ನೀರು ನಲ್ಲಿಯಲ್ಲಿ ಬರುತ್ತವೆ. ಇದರಿಂದ ರೋಗ ಭಯ ಕಾಡುತ್ತಿದೆ. ವಿಧಿ ಇಲ್ಲದೆ ಅದೇ ನೀರು ಬಳಸುವಂತಾಗಿದೆ ಎಂದು ಸ್ಥಳೀಯರಾದ ಗಂಗಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕಾಮಗಾರಿ ಆರಂಭಕ್ಕೂ ಮುನ್ನ ಸೂಕ್ತ ಯೋಜನೆ ರೂಪಿಸದೇ, ತಾಂತ್ರಿಕ ಮಾನದಂಡ ಪಾಲಿಸದೇ, ಕೇವಲ ಕಾಗದದಲ್ಲಿ ಮಾತ್ರ ಗುಣಮಟ್ಟ ತೋರಿಸುವ ಪ್ರಯತ್ನ ನಡೆದಿದೆ. ಗುತ್ತಿಗೆದಾರರು ಕಡಿಮೆ ಗುಣಮಟ್ಟದ ಸಾಮಗ್ರಿಗಳನ್ನು ಬಳಸುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದ್ದರೂ, ಮೇಲ್ವಿಚಾರಣೆ ಮಾಡಬೇಕಾದ ಅಧಿಕಾರಿಗಳು ಮೌನವಹಿಸಿದ್ದಾರೆ ಎಂದು ಪ್ರತಿಭಟನಕಾರರು ದೂರಿದರು.

ಸ್ಥಳೀಯರಾದ ಗಂಗಮ್ಮ, ಪ್ರಮೀಳಾ, ಶಾರದಮ್ಮ, ಲಕ್ಷ್ಮಮ್ಮ, ಭಾರತಿ, ಗಿರಿಜಾ, ಶೃತಿ, ತಿಪ್ಪಮ್ಮ, ನಾರಾಯಣಪ್ಪ ಸೇರಿದಂತೆ ವಾರ್ಡ್ ನಿವಾಸಿಗಳು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-16-1051481083

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.