ಗೌರಿಬಿದನೂರು: ದ್ಯಾವಸಂದ್ರ ಗ್ರಾಮದಲ್ಲಿ ಭಾನುವಾರ ಶನೈಶ್ವರ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು.

ಮೂರು ದಿನ ನಡೆಯುವ ಜಾತ್ರೆಯಲ್ಲಿ ಮೈಲಗಾನಹಳ್ಳಿ, ತರಿಧಾಳು, ನಾಗತೇನಹಳ್ಳಿ ವೀರಮ್ಮನಹಳ್ಳಿ, ಅಲ್ಲೀಪುರ, ಪುಲಗಾನಹಳ್ಳಿ ಹಾಗೂ ಸುತ್ತಮುತ್ತಲಿನ ನೂರಾರು ಗ್ರಾಮಸ್ಥರು ಎತ್ತಿನಗಾಡಿಗಳಲ್ಲಿ ಬಂದು ತಂಬಿಟ್ಟಿನ ಆರತಿ ಸಲ್ಲಿಸುವುದು ತಲೆತಲಾಂತರ ಗಳಿಂದ ಬಂದಿರುವ ವಾಡಿಕೆ.

ಜಾತ್ರಾ ಮಹೋತ್ಸವದ ಅಂಗವಾಗಿ ತೈಲಾಭಿಷೇಕ, ತಿಲಹೋಮ, ಅಂಬಾಭವಾನಿ ದೇವಿ ಸಹಿತ ಗಂಗಾ ಪೂಜೆ, ಮಂಗಳಾರತಿ, ಪ್ರಸಾದ ವಿನಿಯೋಗ ಹಮ್ಮಿಕೊಳ್ಳಲಾಗಿತ್ತು.

ಡಿ.ಜೆ.ಶಿವಾಜಿ ರಾವ್ ಚವ್ಹಾಣ್ ಮಾತನಾಡಿ, ‘ಪಾಶ್ಚಿಮಾತ್ಯ ಸಂಸ್ಕೃತಿಗೆ ಮಾರುಹೋಗುತ್ತಿರುವ ಯುವ ಸಮುದಾಯಕ್ಕೆ ಆಚಾರ,ಸಂಸ್ಕೃತಿ ಮತ್ತು ಧಾರ್ಮಿಕ ಆಚರಣೆಗಳು ನಮ್ಮ ಅಸ್ಮಿತೆಯ ಭಾಗವಾಗಿವೆ ಎಂದು ಮನವರಿಕೆ ಮಾಡಿಕೊಡಬೇಕಾಗಿದೆ’ ಎಂದು ಹೇಳಿದರು.

ಧರ್ಮದರ್ಶಿ ನರಸರಾಜು ಮಾತನಾಡಿ, ಶನೈಶ್ವರ ಜಾತ್ರಾ ಮಹೋತ್ಸವವು ಕಳೆದ 22 ವರ್ಷಗಳಿಂದ ಅದ್ದೂರಿಯಿಂದ ನಡೆದುಕೊಂಡು ಬರುತ್ತಿದೆ ಎಂದರು.

ಅಂಬಾಭವಾನಿ ದೇವಿ ಸೇವಾ ಸಮಿತಿ ಟ್ರಸ್ಟಿನ ಪದಾಧಿಕಾರಿಗಳು, ಛತ್ರಪತಿ ಶಿವಾಜಿ ಯುವಕರ ಸಂಘ, ದ್ಯಾವಸಂದ್ರ ಹಾಗೂ ಅಕ್ಕಪಕ್ಕದ ಗ್ರಾಮಗಳ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-16-2117040516

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.