ಗೌರಿಬಿದನೂರು: ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಬುಧವಾರ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಜಿ. ಪ್ರಭು ಅವರು ಆಸ್ಪತ್ರೆಯಲ್ಲಿ ರೋಗಿಗಳಿಗೆ ಅಗತ್ಯ ಚಿಕಿತ್ಸಾ ಸೌಲಭ್ಯಗಳು ಸಕಾಲದಲ್ಲಿ ಸಿಗುತ್ತಿವೆಯೇ ಎಂಬುದನ್ನು ಪರಿಶೀಲಿಸಿದರು.

ಸರ್ಕಾರಿ ಆಸ್ಪತ್ರೆಗಳಿಗೆ ಆರೋಗ್ಯ ಸೇವೆಗಾಗಿ ಬರುವ ಒಳರೋಗಿಗಳು ಅಥವಾ ಹೊರರೋಗಿಗಳಿಗೆ ಔಷಧಿಗಳನ್ನು ಹೊರಗಡೆ ಖರೀದಿಸುವಂತೆ ಸರ್ಕಾರಿ ವೈದ್ಯಾಧಿಕಾರಿಗಳು ಚೀಟಿ ಬರೆದು ಕೊಡಬಾರದು ಎಂದು ಕಟ್ಟುನಿಟ್ಟಾಗಿ ಸೂಚಿಸಿದರು.

ಜಿಲ್ಲೆಯಲ್ಲಿ ನಾಯಿ ಕಡಿತ, ಹಾವು ಕಡಿತ ಸೇರಿದಂತೆ ಆರೋಗ್ಯ ಸೇವೆಗಳಿಗೆ ಅಗತ್ಯವಿರುವ ಎಲ್ಲ ಔಷಧಿಗಳ ಪೂರೈಕೆಯಲ್ಲಿ ವ್ಯತ್ಯಯವಿಲ್ಲ. ಸರ್ಕಾರದಿಂದ ಉಚಿತವಾಗಿ ಸಿಗಬೇಕಿರುವ ಆರೋಗ್ಯ ತಪಾಸಣೆ, ಚಿಕಿತ್ಸೆ, ಔಷಧಿ ವಿತರಣೆಯ ಎಲ್ಲ ಆರೋಗ್ಯ ಸೇವೆಗಳು ಉಚಿತವಾಗಿ ಜನರಿಗೆ ದೊರೆಯಬೇಕು. ನಗರದ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ ಮಾಸಿಕ ಸರಾಸರಿ 15,000 ಹೊರ ರೋಗಿಗಳು ಮತ್ತು 500 ಒಳರೋಗಿಗಳು ಆರೋಗ್ಯ ಸೇವೆ ಪಡೆಯುತ್ತಿದ್ದಾರೆ. ಅವರೆಲ್ಲರಿಗೂ ಸರ್ಕಾರದಿಂದ ಉಚಿತವಾಗಿ ಸಿಗಬೇಕಿರುವ ಎಲ್ಲ ಆರೋಗ್ಯ ಸೇವೆಗಳು ನ್ಯಾಯೋಚಿತವಾಗಿ ಹಾಗೂ ಸಮಯೋಚಿತವಾಗಿ ನೀಡಲು ನಿಗಾ ವಹಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮುಂದಿನ ದಿನಗಳಲ್ಲಿ ಆರೋಗ್ಯ ಅಭಿಯಾನ ಕೈಗೊಂಡು ಮನೆ ಮನೆಗೆ ತೆರಳಿ, 30 ವರ್ಷ ಮೀರಿದವರ ಹತ್ತು ಕಾಯಿಲೆಗಳ ಪರೀಕ್ಷೆ ನಡೆಸಲಾಗುವುದು. ಮಧುಮೇಹ, ಅಧಿಕ ರಕ್ತದೊತ್ತಡ ಸೇರಿದಂತೆ ಐದು ಕಾಯಿಲೆಗಳನ್ನು ಕರಾರುವಕ್ಕಾಗಿ ಗುರುತಿಸಿ, ಮನೆಗೆ ಓಷಧಿ ತಲುಪಿಸುವ ಕೆಲಸ ಮಾಡಲಾಗುವುದು. ಉಳಿದ ಐದು ಕಾಯಿಲೆಗಳ ಮಾದರಿ ಸಂಗ್ರಹಿಸಿ ಪರೀಕ್ಷೆ ನಡೆಸಿ ಕಾಯಿಲೆ ತೀರ್ಮಾನಿಸಿ ಓಷಧಿ ನೀಡಲಾಗುವುದು ಎಂದು ತಿಳಿಸಿದರು.

ಜಿಲ್ಲಾ ಆಸ್ಪತ್ರೆಗೆ ಅಗತ್ಯವಿರುವ ಸಿಟಿ ಮತ್ತು ಎಂಆರ್ಐ ಸ್ಕ್ಯಾನಿಂಗ್ ಯಂತ್ರ ಖರೀದಿಸಲು ಈಗಾಗಲೇ ಆರ್ಡರ್ ನೀಡಲಾಗಿದೆ. ಕಿಡ್ನಿ, ಮೆದುಳು, ಹೃದಯ, ಬೆನ್ನು ಮೂಳೆಗೆ ಸಂಬಂಧಿಸಿದ ಕಾಯಿಲೆಗಳಿಗೆ ಜಿಲ್ಲಾ ಕೇಂದ್ರದಲ್ಲಿರುವ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಸೂಪರ್ ಸ್ಪೆಷಾಲಿಟಿ ಆರೋಗ್ಯ ಸೇವೆಗಳನ್ನು ಉಚಿತವಾಗಿ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ತಹಶೀಲ್ದಾರ್ ಅರವಿಂದ, ನಗರಸಭೆ ಪೌರಾಯುಕ್ತ ರಮೇಶ್, ತಾಲ್ಲೂಕು ಆಡಳಿತ ವೈದ್ಯಾಧಿಕಾರಿ ಡಾ. ಹೇಮಾ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಲಕ್ಷ್ಮಿಕಾಂತ್ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-16-2127631111

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.