ಗೌರಿಬಿದನೂರು: ತಾಲ್ಲೂಕಿನ 25 ಸ್ಥಳಗಳಲ್ಲಿ ನಡೆದ ದಾಳಿಯಲ್ಲಿ ಗೃಹ ಬಳಕೆಯ 36 ಸಿಲಿಂಡರ್ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಅರವಿಂದ್ ಕೆ.ಎಂ ತಿಳಿಸಿದ್ದಾರೆ.

ನಗರ ಮತ್ತು ಗ್ರಾಮಾಂತರ ಭಾಗಗಳಲ್ಲಿ ಹೋಟೆಲ್, ಚಿಕನ್ ಅಂಗಡಿ ಸೇರಿದಂತೆ ವಿವಿಧ ಅಂಗಡಿಗಳಲ್ಲಿ ಗೃಹ ಬಳಕೆ ಸಿಲಿಂಡರ್ಗಳನ್ನು ಅನಧಿಕೃತವಾಗಿ ವಾಣಿಜ್ಯ ಉದ್ದೇಶಗಳಿಗಾಗಿ ಬಳಸಲಾಗುತ್ತಿತ್ತು. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ದಾಳಿ ಮಾಡಿ, ಸಿಲಿಂಡರ್ ವಶಪಡಿಸಿಕೊಳ್ಳಲಾಗಿದೆ. ಗೃಹ ಬಳಕೆಯ ಸಿಲಿಂಡರ್ಗಳನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸಿದರೆ ಹಾಗೂ ಅಕ್ರಮವಾಗಿ ದಾಸ್ತಾನು ಮಾಡಿದರೆ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ತಾಲ್ಲೂಕಿನಲ್ಲಿ ಗೃಹ ಬಳಕೆಯ ಸಿಲಿಂಡರ್ ಅಭಾವವಿಲ್ಲ. ಸಾರ್ವಜನಿಕರು ಊಹಾಪೋಹಗಳಿಗೆ ಆತಂಕಪಡುವ ಅಗತ್ಯವಿಲ್ಲ. ಈ ಮೊದಲಿನಂತೆಯೇ ಸಿಲಿಂಡರ್ ಸರಬರಾಜು ಆಗಲಿವೆ ಎಂದು ತಿಳಿಸಿದರು.

ನಗರಸಭೆ ಆರೋಗ್ಯ ನಿರೀಕ್ಷಕ ನವೀನ್, ಪೊಲೀಸರು ದಾಳಿಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260322-16-635482997

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.