ಗೌರಿಬಿದನೂರು: ತಾಲ್ಲೂಕಿನ ಉತ್ತರ ಪಿನಾಕಿನಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಂಡಿ ಅಅಣೆಕಟ್ಟೆಗೆ ನೂತನ ಎಫ್ಆರ್ಪಿ ಗೇಟ್ ಅಳವಡಿಸುವ ಕಾಮಗಾರಿಗೆ ಶಾಸಕ ಕೆ. ಎಚ್.ಪುಟ್ಟಸ್ವಾಮಿ ಗೌಡ ಬುಧವಾರ ಚಾಲನೆ ನೀಡಿದರು.

ತಾಲ್ಲೂಕಿನ ಜೀವ ನದಿಯಾಗಿದ್ದ ಉತ್ತರ ಪಿನಾಕಿನಿ, ಮಳೆ ಬಂದು ತುಂಬಿ ಹರಿದಾಗ ಶಿಥಿಲವಾಗಿದ್ದ ಗೇಟ್ಗಳಿಂದ ತಾಲ್ಲೂಕಿನ ಕೆರೆಗಳಿಗೆ ತುಂಬದೆ ವ್ಯರ್ಥವಾಗಿ ಹರಿದು ಹೋಗುತ್ತಿತ್ತು. ಈ ಗೇಟ್ ಅಳವಡಿಕೆಯಿಂದ ತಾಲ್ಲೂಕಿನ ಕೆರೆಗಳಿಗೆ ಸರಾಗವಾಗಿ ನೀರು ಹರಿದು ಕೆರೆ ತುಂಬಲಿವೆ ಎಂದರು.

ತಾಲ್ಲೂಕಿನ 19 ಗ್ರಾಮಗಳಲ್ಲಿ ₹3.20 ಕೋಟಿ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಸಣ್ಣ ರಸ್ತೆಗಳು ಒಂದು ತಿಂಗಳೊಳಗೆ ಹಾಗೂ ದೊಡ್ಡ ರಸ್ತೆಗಳು ಎರಡು ತಿಂಗಳ ಒಳಗೆ ಕಾಮಗಾರಿ ಮಾಡಲು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಕಟ್ಟುನಿಟ್ಟಿನಲ್ಲಿ ಸೂಚನೆ ನೀಡಲಾಗಿದೆ. ಮುಂದಿನ ವಾರ ₹5 ಕೋಟಿ ವೆಚ್ಚದ ವಿವಿಧ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.

ನಗರಸಭೆ ಮಾಜಿ ಅಧ್ಯಕ್ಷ ಲಕ್ಷ್ಮಿನಾರಾಯಣಪ್ಪ, ಶ್ರೀನಿವಾಸ್ ಗೌಡ, ಕಲೀಂ ಉಲ್ಲಾ, ಅಮರನಾಥ್, ಲಕ್ಷ್ಮಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.