ಗೌರಿಬಿದನೂರು: ‘ತಾಲ್ಲೂಕಿನಲ್ಲಿ ಬಡವರಿಗೆ ಹಂಚಿಕೆ ಮಾಡುತ್ತಿರುವ ನಿವೇಶನಗಳಲ್ಲಿ 3/1 ಭಾಗ ಅನರ್ಹರೆ ತುಂಬಿದ್ದಾರೆ’ ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಗಂಗಪ್ಪ ತಾಲ್ಲೂಕು ಆಡಳಿತದ ವಿರುದ್ಧ ಗಂಭೀರ ಆರೋಪ ಮಾಡಿದರು.

ಸಿಪಿಎಂ ಕಚೇರಿಯಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ‘ತಾಲ್ಲೂಕಿನಲ್ಲಿ ಆಡಳಿತ ಸಂಪೂರ್ಣ ವಿಫಲವಾಗಿ ಜನರು ಕಂಗಾಲಾಗಿದ್ದಾರೆ. ಇತ್ತೀಚೆಗೆ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ನಿವೇಶನ ಹಂಚಿಕೆ ಮಾಡಲು ಗ್ರಾಮಸಭೆ ಮಾಡಲಾಗುತ್ತಿದೆ. ಆದರೆ ಜನರಿಗೆ ತಾಲ್ಲೂಕು ಆಡಳಿತದ ಮೇಲೆ ವಿಶ್ವಾಸವಿಲ್ಲದೆ ಪಂಚಾಯಿತಿಗಳಲ್ಲಿ ಜಗಳವಾಡುವಂತಾಗಿದೆ. ನ್ಯಾಯ ಕೇಳುವವರ ಬಾಯಿ ಮುಚ್ಚಿಸಲು ಪೊಲೀಸರು ಮಧ್ಯಪ್ರವೇಶ ಮಾಡುತ್ತಿರುವುದು ಅಪಾಯಕಾರಿ ಬೆಳವಣಿಗೆ. ಯಾಯ ಕೇಳುವವರ ಫೋಟೊ ತೆಗೆದುಕೊಳ್ಳಿ ಎಂದು ಶಾಸಕರು ಪೊಲೀಸರಿಗೆ ಹೇಳುತ್ತಿರುವುದು ಜನರ ಹಕ್ಕನ್ನು ಕಸಿಯುವಂತಾಗಿದೆ’ ಎಂದರು.

‘ಶಾಸಕರು ನಿಜವಾದ ಬಡವರಿಗೆ ನಿವೇಶನ ನೀಡಬೇಕು ಎಂದು ಹೇಳುತ್ತಾರೆ. ಆದರೆ ನಿಜವಾದ ಬಡವರಿಗೆ ನಿವೇಶನ ಸಿಗುತ್ತಿಲ್ಲ. ಅಧಿಕಾರಿಗಳು ಹಣ ಪಡೆದರೆ ಅಥವಾ ರಾಜಕೀಯ ಪ್ರಭಾವಕ್ಕೆ ಒಳಗಾದರೆ ಎಂಬ ಸಂಶಯ ಮೂಡುತ್ತಿದೆ. ಈ ಬಗ್ಗೆ ತನಿಖೆಯಾಗಬೇಕು. ಶಾಸಕರು, ತಹಶೀಲ್ದಾರ್, ಇಒ ಬಹಿರಂಗ ಚರ್ಚೆಗೆ ಬಂದರೆ ದಾಖಲೆ ಬಹಿರಂಗಪಡಿಸುವೆ’ ಎಂದರು.

‘ಗ್ರಾಮಸಭೆ ನಡೆಸಬೇಕಾದರೆ ಅಲ್ಲಿ ಸ್ಥಳೀಯ ಸಂಸ್ಥೆಗಳು ಇರುತ್ತವೆ. ಅಲ್ಲಿ ಶಾಸಕರ ಉಪಸ್ಥಿತಿ ಬೇಕಾಗಿಲ್ಲ ಎಂದು ಸರ್ಕಾರದ ಸುತ್ತೋಲೆ ಇದೆ. ಆದರೆ ಗ್ರಾಮ ಸಭೆಗಳಲ್ಲಿ ಎಲ್ಲ ಅಧಿಕಾರಿಗಳು ಶಾಸಕರ ಮಾತಿನಂತೆ ತೀರ್ಮಾನ ಮಾಡುತ್ತಿದ್ದಾರೆ. ಶಾಸಕರು ಕಂದಾಯ ಇಲಾಖೆಯಿಂದ ಭೂಮಿ ಮಂಜೂರು ಮಾಡಿಸಿಕೊಂಡು ಬಳಿಕ, ನಿವೇಶನ ಮಾಡಿ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕಿತ್ತು. ಆದರೆ ನಿವೇಶನ ಮಾಡುವುದಕ್ಕೂ ಮೊದಲೇ ನಿವೇಶನ ಹಂಚಿಕೆ ಮಾಡುತ್ತಿರುವುದು ಅಸಿಂಧುವಾಗಿದೆ. ಕೂಡಲೇ ಇದನ್ನು ರದ್ದುಪಡಿಸಬೇಕು’ ಎಂದು ಒತ್ತಾಯಿಸಿದರು.

‘ತಾಲ್ಲೂಕಿನಲ್ಲಿ ಈವರೆಗೆ ಭೂ ನ್ಯಾಯ ಮಂಡಳಿ ರಚನೆಯಾಗದೆ ಉಳುಮೆ ಮಾಡುತ್ತಿರುವ ರೈತರಿಗೆ ಅನ್ಯಾಯವಾಗುತ್ತಿದೆ. ಆದರೆ ಬಲಿಷ್ಠರು ಮಾತ್ರ ಜಮೀನುಗಳಿಗೆ ಕಾಂಪೌಂಡ್ ನಿರ್ಮಿಸಿಕೊಂಡು ಭದ್ರಪಡಿಸಿಕೊಳ್ಳುತ್ತಿದ್ದಾರೆ’ ಎಂದರು.

‘ಮೇ 26ರಂದು ತಾಲ್ಲೂಕು ಪಂಚಾಯಿತಿಗೆ ಮುತ್ತಿಗೆ ಹಾಕಲಾಗುವುದು’ ಎಂದರು. ಬಾಬು ರೆಡ್ಡಿ, ಅನೂಡಿ ನಾಗರಾಜ್, ಇಬ್ರಾಹಿಂ ಬೇಗ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-16-1891799292

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.