ಗೌರಿಬಿದನೂರು: ನಗರದ ನ್ಯಾಷನಲ್ ಕಾಲೇಜಿನಲ್ಲಿ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಯಿತು.

ತಹಶೀಲ್ದಾರ್ ಅರವಿಂದ್ ಕೆ.ಎಂ ಮಾತನಾಡಿ, ‘ಅಧ್ಯಯನಕ್ಕೆ ಅಂತ್ಯ ಎಂಬುದೇ ಇಲ್ಲ. ನಿರಂತರ ಕಲಿಕೆ ಮಾತ್ರವೇ ಮನುಷ್ಯನನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುತ್ತದೆ. ಕಲಿಕೆಯು ನಿಂತರ ನೀರಲ್ಲ. ವಿದ್ಯಾರ್ಥಿಗಳು ಶೈಕ್ಷಣಿಕ ಅಭ್ಯಾಸದ ಜೊತೆಗೆ ಉತ್ತಮ ಪುಸ್ತಕಗಳನ್ನು ನಿರಂತರವಾಗಿ ಅಭ್ಯಾಸ ಮಾಡಬೇಕು. ಹೀಗಾದಲ್ಲಿ, ಉತ್ತಮ ಗುರಿ ಮುಟ್ಟಲು ಸಾಧ್ಯವಾಗುತ್ತದೆ’ ಎಂದು ಹೇಳಿದರು.

ಗೌರವ ಕಾರ್ಯದರ್ಶಿ ವೆಂಕಟಶಿವಾರೆಡ್ಡಿ ಮಾತನಾಡಿ, ವಿದ್ಯಾರ್ಥಿಗಳಿಗೆ ಕಾಲೇಜು ಮರೆಯಲಾರದ ಸಿಹಿ ನೆನಪು. ಈ ಸಿಹಿ ನೆನಪುಗಳಲ್ಲಿ ಮೈ ಮರೆಯದೆ ಉತ್ತಮ ಭವಿಷ್ಯ ರೂಪಿಸಿಕೊಳ್ಳುವುದನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು.

ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ. ಶೈಲಜಾ ಸಪ್ತಗಿರಿ ಕಾಲೇಜಿನ ವರದಿ ವಚನ ಮಾಡಿದರು.

ಈ ವೇಳೆ ಸಂಸ್ಥೆ ಅಧ್ಯಕ್ಷ ಡಾ. ಸುಬ್ರಮಣ್ಯ, ಜಂಟಿ ಕಾರ್ಯದರ್ಶಿ ಸುಧಾಕರ್, ಉಪ ಪ್ರಾಂಶುಪಾಲೆ ನೇತ್ರ, ಪ್ರೊಫೆಸರ್ಗಳಾದ ಮಂಜುನಾಥ್, ಶಿವಣ್ಣ, ರಾಜೇಶ್ವರಿ, ಸಿದ್ದಲಿಂಗಯ್ಯ, ಜಗದೀಶ್, ನಾಗರಾಜ್, ಗುಣ ರಂಜನಿ, ಸುನೀತಾ ಸಂಗೀತಾ, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-16-535011493

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.