ಗೌರಿಬಿದನೂರು: ನಿವೇಶನ ಹಂಚಿಕೆ ವಿಚಾರದಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಿಐಟಿಯು ಸಂಘಟನೆ ನೇತೃತ್ವದಲ್ಲಿ ಸೊನಗಾನಹಳ್ಳಿ ಪಂಚಾಯಿತಿಗೆ ಗ್ರಾಮಸ್ಥರು ಬೀಗ ಹಾಕಿ ಸೋಮವಾರ ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಬಡವರಿಗೆ ಮೋಸ ಮಾಡುತ್ತಿದ್ದಾರೆ ಎಂದು ಘೋಷಣೆ ಕೂಗಿದರು.

ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಗಂಗಪ್ಪ ಮಾತನಾಡಿ, ನಿವೇಶನ ರಹಿತರಿಗೆ ನಿವೇಶನ ನೀಡಲು ನಡೆಸುತ್ತಿರುವ ಗ್ರಾಮಸಭೆ ಗ್ರಾಮ ಪಂಚಾಯಿತಿ ಸದಸ್ಯರ ನೇತೃತ್ವದಲ್ಲಿ ನಡೆದು ನಿಜವಾದ ನಿವೇಶನ ರಹಿತರನ್ನು ಗುರುತಿಸಿ ಹಂಚಿಕೆ ಮಾಡಬೇಕು. ಆದರೆ, ಶಾಸಕರು ತಹಶೀಲ್ದಾರ್ ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಗ್ರಾಮಸಭೆ ನಡೆಸುತ್ತಿರುವುದು ರಾಜಕೀಯವಾಗಿದೆ. ಶಾಸಕರಿಗೆ ಗ್ರಾಮಸಭೆ ನಡೆಸುವ ಅಧಿಕಾರವಿಲ್ಲ. ತಹಶೀಲ್ದಾರ್ ಕಂದಾಯ ಇಲಾಖೆಗೆ ಸಂಬಂಧಿಸಿದ ಜಮೀನನ್ನು ನೀಡುವುದಷ್ಟೇ ಅವರ ಕೆಲಸ. ಗ್ರಾಮ ಸಭೆಗಳಲ್ಲಿ ಭಾಗವಹಿಸುವ ಅಧಿಕಾರ ಅವರಿಗಿಲ್ಲ. ಇಲ್ಲವಾದಲ್ಲಿ ತಾಲ್ಲೂಕು ಪಂಚಾಯಿತಿ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಪಿಡಿಒ ಮುನಿಯೋಜಿ ರಾವ್ ಮತ್ತು ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-16-1180810870

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.