ಗೌರಿಬಿದನೂರು: ತಾಲ್ಲೂಕಿನ ತೊಂಡೇಬಾವಿ ಹೋಬಳಿಯ ತರಿದಾಳು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಸಪ್ತಗಿರಿ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ಭಾನುವಾರ ಹಮ್ಮಿಕೊಳ್ಳಲಾಯಿತು.

ಡಾ. ಎಚ್. ಎನ್.ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎನ್.ಎಚ್. ಶಿವಶಂಕರ ರೆಡ್ಡಿ ಮಾತನಾಡಿ, ಗ್ರಾಮೀಣ ಭಾಗದಲ್ಲಿ ಬಡವರು, ರೈತರು, ಕೂಲಿ ಕಾರ್ಮಿಕರು ಹೆಚ್ಚಾಗಿರುವುದರಿಂದ ಇಲ್ಲಿನ ನಾಗರಿಕರ ಆರೋಗ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಖಾಸಗಿ ಆಸ್ಪತ್ರೆಗಳ ದುಬಾರಿ ವೆಚ್ಚ ಭರಿಸಲಾಗದ ಹಿರಿಯರು, ವಯೋವೃದ್ಧರು, ಮಹಿಳೆಯರಿಗೆ ಇಂತಹ ಉಚಿತ ತಪಾಸಣಾ ಶಿಬಿರ ಸಹಕಾರಿ ಎಂದರು.

ಯುವ ಮುಖಂಡ ಪ್ರತಾಪ್ ಚವ್ಹಾಣ್ ಮಾತನಾಡಿ, ಗ್ರಾಮೀಣ ಪ್ರದೇಶದ ನಾಗರಿಕರ ಆರೋಗ್ಯ ಸುಧಾರಣೆ ಉದ್ದೇಶದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ. ನುರಿತ ತಜ್ಞ ವೈದ್ಯರ ತಂಡದೊಂದಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಿ ಅಗತ್ಯ ಔಷಧ ವಿತರಿಸಲಾಗುತ್ತಿದೆ ಎಂದರು.

ಈ ವೇಳೆ ಭವಾನಿ ನಾಗೇಶ್, ಗಿರೀಶ್ ರೆಡ್ಡಿ, ಅನಂತರಾವ್ ಚವ್ಹಾಣ್, ದೊಡ್ಮನೆ ಅಂಬಾಜಿರಾವ್, ಅಪ್ಪು, ಗಿರೀಶ್ ಚವ್ಹಾಣ್, ರಾಮು, ಶ್ರೀನಿವಾಸ್ ರಾವ್, ಮಂಜುನಾಥ್, ಮೂರ್ತಿ, ಕೃಷ್ಣಪ್ಪ, ಸಪ್ತಗಿರಿ ಆಸ್ಪತ್ರೆ ವೈದ್ಯರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-16-957429512

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.