ಗೌರಿಬಿದನೂರು: ತಾಲ್ಲೂಕಿನ ತೊಂಡೇಬಾವಿ ಗ್ರಾಮ ಪಂಚಾಯಿತಿ ವತಿಯಿಂದ ಶುಕ್ರವಾರ ವಸತಿ ರಹಿತರಿಗೆ ನಿವೇಶನ ಹಂಚಿಕೆ ಕುರಿತು ಗ್ರಾಮಸಭೆ ಹಮ್ಮಿಕೊಳ್ಳಲಾಯಿತು.

ಶಾಸಕ ಕೆ.ಎಚ್. ಪುಟ್ಟಸ್ವಾಮಿ ಗೌಡ ಮಾತನಾಡಿ, ‘ವಸತಿ ರಹಿತರಿಗೆ ನಿವೇಶನ ಹಂಚಿಕೆ ಮಾಡುವುದು ನಮ್ಮ ಮೊದಲ ಆದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ಕಾಲಮಿತಿಯೊಳಗೆ ಕ್ರಮ ಕೈಗೊಳ್ಳಲಾಗುವುದು’ ಎಂದು ಹೇಳಿದರು.

ಕಳೆದ ಮೂರು ವರ್ಷಗಳಿಂದ ತಾಲ್ಲೂಕಿನ ಪ್ರತಿಯೊಬ್ಬರೂ ನಿವೇಶನ ಮತ್ತು ಮನೆಗಾಗಿ ಮನವಿ ಪತ್ರಗಳನ್ನು ಸಲ್ಲಿಸುತ್ತಿದ್ದರು. ದಶಕಗಳಿಂದ ನಿವೇಶನ ವಂಚಿತರಾಗಿರುವ ಕುಟುಂಬಗಳ ಪಟ್ಟಿ ಸಿದ್ಧಪಡಿಸಿ, ಅವರಿಗೆ ಹಂತಹಂತವಾಗಿ ನಿವೇಶನ ವಿತರಿಸುವ ಯೋಜನೆಯನ್ನು ತಾಲ್ಲೂಕು ಆಡಳಿತ ರೂಪಿಸಿದೆ ಎಂದರು.

ಈ ಪಂಚಾಯಿತಿಯಲ್ಲಿ ಈಗಾಗಲೇ ಆನ್ಲೈನ್ ಮೂಲಕ ಸ್ವೀಕೃತವಾದ 208 ಅರ್ಜಿಗಳಲ್ಲಿ 98 ನಿವೇಶನಗಳ ಹಂಚಿಕೆಗೆ ಕ್ರಮ ಕೈಗೊಳ್ಳಲಾಗಿದೆ. ಉಳಿದ ಅರ್ಜಿಗಳು ತಾಂತ್ರಿಕ ಕಾರಣಗಳಿಂದ ಬಾಕಿ ಉಳಿದಿದ್ದು, ಮರು ಪರಿಶೀಲಿಸಲಾಗುವುದು ಎಂದರು.

ತಾಲ್ಲೂಕಿನಾದ್ಯಂತ ನಿವೇಶನ ರಹಿತರ ಪಟ್ಟಿ ಸಿದ್ಧಪಡಿಸಲು ಮತ್ತು ಲಭ್ಯವಿರುವ ಸರ್ಕಾರಿ ಜಾಗಗಳನ್ನು ಗುರುತಿಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ತಾಲ್ಲೂಕು ಪಂಚಾಯಿತಿ ಇಒ ಜಿ.ಕೆ.ಹೊನ್ನಯ್ಯ ಮಾತನಾಡಿ, ವಸತಿ ಯೋಜನೆಗಳಡಿ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲಾಗುವುದು. ಗ್ರಾಮಸ್ಥರ ಸಮ್ಮುಖದಲ್ಲಿ ಅರ್ಹರನ್ನು ಗುರುತಿಸಿ, ಪಟ್ಟಿ ಸಿದ್ಧಪಡಿಸಲಾಗುವುದು ಎಂದರು.

ಈ ಸಭೆಯಲ್ಲಿ ಆಡಳಿತಾಧಿಕಾರಿ ಮುನಿರತ್ನಮ್ಮ, ತಾ.ಪಂ ವ್ಯವಸ್ಥಾಪಕ ಬಾಲಕೃಷ್ಣ, ಪಿಡಿಒ ಪೃಥ್ವಿಭಾ, ಚಿಮುಲ್ ನಿರ್ದೇಶಕ ಜೆ.ಕಾಂತರಾಜ್ ಹಾಗೂ ಫಲಾನುಭವಿಗಳು ಮತ್ತು ಗ್ರಾಮಸ್ಥರು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-16-432267122

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.