ಗೌರಿಬಿದನೂರು: ನಗರದ ಬೆಂಗಳೂರು–ಹಿಂದೂಪುರ ಬೈಪಾಸ್ ರಸ್ತೆಯ ಪ್ಲಾಟಿನಮ್ ಸಿಟಿ ಬಳಿ ಯುವಕರ ಎರಡು ಗುಂಪುಗಳ ಮದ್ಯೆ ಗುರುವಾರ ಗಲಾಟೆ ನಡೆದಿದೆ.

ಈ ಘಟನೆಯಲ್ಲಿ ಆರ್ಎಕ್ಸ್ ಸೂರಿ (29) ಎಂಬ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದು, ಆತನ ತಲೆಗೆ ತೀವ್ರ ಪೆಟ್ಟಾಗಿದೆ. ಗಾಯಾಳುವನ್ನು ನಗರದ ಸರ್ಕಾರಿ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರಕ್ಕೆ ಕರೆದೊಯ್ಯಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಗಾಯಾಳು ಸೂರಿ, ‘ನನಗೆ ಪರಿಚಯವಿರುವ ಯುವಕರ ಮಧ್ಯೆ ಗಲಾಟೆ ನಡೆದಿದ್ದು, ಬುದ್ಧಿವಾದ ಹೇಳಲು ಹೋಗಿದ್ದ ನನ್ನ ಮೇಲೆ 10ಕ್ಕೂ ಹೆಚ್ಚು ಮಂದಿ ಹಲ್ಲೆ ಮಾಡಿದ್ದಾರೆ’ ಎಂದು ಆರೋಪಿಸಿದರು.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-16-1024053735

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.