ಗೌರಿಬಿದನೂರು: ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಸಮಾಜದ ಎಲ್ಲ ವರ್ಗದ ಸಮುದಾಯಗಳನ್ನು ಒಂದುಗೂಡಿಸುವ ಮೂಲಕ ಸಾಮಾಜಿಕ ನ್ಯಾಯದ ಹರಿಕಾರರಾಗಿದ್ದಾರೆ ಎಂದು ತಹಶೀಲ್ದಾರ್ ಮಹೇಶ್ ಎಸ್. ಪತ್ರಿ ಹೇಳಿದರು.

ನಗರದಲ್ಲಿ ತಾಲ್ಲೂಕು ಆಡಳಿತ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾನುವಾರ ಹಮ್ಮಿಕೊಂಡಿದ್ದ ‘ಡಿ.ದೇವರಾಜು ಅರಸು ಅವರು 108ನೇ ಜನ್ಮ ದಿನಾಚರಣೆ’ ಸಮಾರಂಭದಲ್ಲಿ ಅರಸು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಅವರು ಮಾತನಾಡಿದರು.

‘ದೇವರಾಜ ಅರಸು ಅವರು ಸಮಾಜದ ಎಲ್ಲ ವರ್ಗದ ಜನರ ಅಭಿವೃದ್ಧಿಗಾಗಿ ಕೆಲಸ ಮಾಡಿದ್ದಾರೆ. ಉಳುವವನೇ ಭೂಮಿಯ ಒಡೆಯ, ಶಿಕ್ಷಣ, ವಿದ್ಯಾರ್ಥಿವೇತನ, ವಿದ್ಯಾರ್ಥಿನಿಲಯ ಸೇರಿದಂತೆ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಜೀತ ಪದ್ಧತಿ ಮುಕ್ತ ರಾಜ್ಯವಾಗಬೇಕು ಎಂಬ ನಿಟ್ಟಿನಲ್ಲಿ ಸಾಕಷ್ಟು ಶ್ರಮಿಸಿದ್ದಾರೆ. ಹಾಗಾಗಿ ಅರಸು ಅವರ ಆದರ್ಶ ಮತ್ತು ಮೌಲ್ಯಗಳನ್ನು ನಾವೆಲ್ಲರೂ ಪಾಲಿಸೋಣ’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಇಒ ಆರ್.ಹರೀಶ್ ಮಾತನಾಡಿ, ‘ದೇವರಾಜ ಅರಸು ಅವರ ಜನ್ಮದಿನಾಚರಣೆ ನಮ್ಮೆಲ್ಲರಿಗೂ ಮಾದರಿ ಜಯಂತಿಯಾಗಬೇಕು. ಅರಸು ರಾಜ್ಯ ಕಂಡ ಅಪ್ರತಿಮ ರಾಜಕಾರಣಿ. ಸಾಮಾಜಿಕವಾಗಿ ಸಮಾನತೆ ತರುವ ಉದ್ದೇಶವಿಟ್ಟುಕೊಂಡು ಸಾಮಾಜಿಕ, ಆರ್ಥಿಕವಾಗಿ ಬದಲಾಣೆ ತರಲು ಕೆಲಸ ಮಾಡಿದ್ದರು’ ಎಂದು ತಿಳಿಸಿದರು.

ನಗರಸಭೆ ಆಯುಕ್ತೆ ಡಿ.ಎಂಗೀತಾ ಮಾತನಾಡಿ, ಅರಸು ಅವರ ಚಿಂತನೆ, ಆಲೋಚನೆ, ಶೋಷಿತರ ಮೇಲಿನ ಕಳಕಳಿಯಿಂದಾಗಿ ಅವರನ್ನು ಎಲ್ಲ ಮುಖ್ಯಮಂತ್ರಿಗಳಿಂದ ಪ್ರತ್ಯೇಕಿಸಿ ವಿಶೇಷ ಸ್ಥಾನದಲ್ಲಿ ಕೂರಿಸಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ವನಜಾಕ್ಷಿ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ವಿ.ಶ್ರೀನಿವಾಸಮೂರ್ತಿ, ವಿಶ್ವಕರ್ಮ ಸಮುದಾಯದ ತಾಲ್ಲೂಕು ಅಧ್ಯಕ್ಷ ಎಂ.ಎನ್.ರಾಧಾಕೃಷ್ಣ, ಹಿಂದುಳಿದ ವರ್ಗಗಳ ಇಲಾಖೆಯ ವಸತಿ ನಿಲಯದ ಮೇಲ್ವಿಚಾರಕರಾದ ನಾಗರಾಜ್ ನಾಯಕ್, ನರಸಿಂಹಮೂರ್ತಿ, ಬಸಪ್ಪ, ವಸಂತಕುಮಾರಿ, ಅರುಣಮ್ಮ, ಸಿಬ್ಬಂದಿ ಮತ್ತು ವಸತಿ ನಿಲಯದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಶಾಸಕ ಸಮುದಾಯ ಮುಖಂಡರ ಗೈರು

ನಗರದಲ್ಲಿ ಭಾನುವಾರ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯಿಂದ ಆಯೋಜಿಸಿದ್ದ ಡಿ.ದೇವರಾಜ ಅರಸು ಜಯಂತಿ ಕಾರ್ಯಕ್ರಮದಲ್ಲಿ ಬೆರಳೆಣಿಕೆಯಷ್ಟು ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಮಾತ್ರವೇ ಹಾಜರಿದ್ದರು. ಸ್ಥಳೀಯ ಶಾಸಕ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಹಿಂದುಳಿದ ವರ್ಗಗಳ ಸಮುದಾಯಗಳ ಮುಖಂಡರ ಗೈರು ಎದ್ದು ಕಾಣುತ್ತಿತ್ತು. ತಾಲ್ಲೂಕು ಮಟ್ಟದ ಕಾರ್ಯಕ್ರಮವು ಯಾವುದೇ ಪೂರ್ವಸಿದ್ಧತೆಯಿಲ್ಲದೆ ಕಾಟಾಚಾರಕ್ಕೆ ಮಾಡಿದಂತಿದೆ ಇದು ಇಲಾಖೆಯ ಅಧಿಕಾರಿಗಳ ಕಾರ್ಯವೈಖರಿಗೆ ಕೈಗನ್ನಡಿಯಾಗಿದೆ ಎನ್ನುವ ಆರೋಪಗಳು ಕೇಳಿಬಂದಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.