ಚಿಕ್ಕಬಳ್ಳಾಪುರ: ಲಿಂಗತ್ವ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಕುರಿತು ನಿಖರ ಮಾಹಿತಿ ಸಂಗ್ರಹಿಸಿ, ಪುನರ್ವಸತಿ ಕಲ್ಪಿಸಲು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಸಮೀಕ್ಷೆ ಕುರಿತು ಪೋಸ್ಟರ್ ಗಳನ್ನು ಮತ್ತು ಸಮೀಕ್ಷಾ ಟ್ಯಾಬ್ಗಳನ್ನು ಬಿಡುಗಡೆ ಮಾಡಿ ಮಾತನಾಡಿದರು.

ದೇಶದಲ್ಲೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ ಸಮೀಕ್ಷೆ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಕೈಗೊಳ್ಳಲಾಗುತ್ತಿದೆ. ಲಿಂಗತ್ವ ಅಲ್ಪಸಂಖ್ಯಾತರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಕುರಿತಂತೆ ನಿಖರ ಮಾಹಿತಿ ಸಂಗ್ರಹಿಸಿ, ಮುಂದಿನ ದಿನಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರದಿಂದ ಯೋಜನೆಗಳನ್ನು ಸೂಕ್ತ ರೀತಿಯಲ್ಲಿ ತಲುಪಿಸಲು ಸಮೀಕ್ಷೆಯು ಅವಶ್ಯಕವಾಗಿದೆ ಎಂದರು.

ರಾಜ್ಯದಾದ್ಯಂತ ಏಕ ಕಾಲದಲ್ಲಿ ಸೆ.15 ರಿಂದ ಸಮೀಕ್ಷೆ ಆರಂಭವಾಗುತ್ತಿದೆ. 45 ದಿನ ಸಮೀಕ್ಷೆ ನಡೆಸಲಾಗುತ್ತಿದೆ. ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದವರೇ ಸಮೀಕ್ಷೆ ಕಾರ್ಯ ಮಾಡುತ್ತಿರುವುದು ಈ ಸಮೀಕ್ಷೆಯ ವಿಶೇಷತೆ. ಜಿಲ್ಲೆಯಲ್ಲಿ ಸಮುದಾಯ ಆಧಾರಿತ ನಿಸರ್ಗ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಮುದಾಯದವರನ್ನೇ ಸಮೀಕ್ಷೆದಾರರನ್ನಾಗಿ ಆಯ್ಕೆ ಮಾಡಲಾಗಿದೆ. ಸಮೀಕ್ಷೆದಾರರಿಗೆ ವಿವಿಧ ಹಂತದ ತರಬೇತಿ ನೀಡಲಾಗಿದೆ. ಲಿಂಗತ್ವ ಅಲ್ಪಸಂಖ್ಯಾತರು ಯಾವುದೇ ಮುಜುಗರಕ್ಕೆ ಒಳಗಾಗದೆ ಮುಕ್ತವಾಗಿ ಸಮೀಕ್ಷೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಸಮೀಕ್ಷೆ ಕಾರ್ಯವನ್ನು ಮೊಬೈಲ್ ಆ್ಯಪ್ ‘KARMANI Web Application’ ಮೂಲಕ ಟ್ಯಾಬ್ಗಳಲ್ಲಿ ಸುಮಾರು 150 ಪ್ರಶ್ನಾವಳಿಯನ್ನು ಕೇಳುವ ಮೂಲಕ ನಡೆಸಲಾಗುತ್ತಿದೆ. ತಾಲ್ಲೂಕು ಸರ್ಕಾರಿ ಆಸ್ಪತ್ರೆಗಳು ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಸಮೀಕ್ಷೆಗೆ ಒಂದು ಕೊಠಡಿಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಲಿಂಗತ್ವ ಅಲ್ಪಸಂಖ್ಯಾತರು ತಮ್ಮ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ತೆರಳಿ ಸಮೀಕ್ಷೆಯಲ್ಲಿ ತಪ್ಪದೆ ಭಾಗವಹಿಸಲು ಅರಿವು ಕಾರ್ಯಕ್ರಮಗಳನ್ನು ಸಹ ನಡೆಸಲಾಗಿದೆ ಎಂದರು.

ಮಾಹಿತಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆ ಸಂಪರ್ಕಿಸಬಹುದು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಮಹೇಶ್ ಕುಮಾರ್, ಮಹಿಳಾ ಅಭಿವೃದ್ಧಿ ನಿರೀಕ್ಷಕಿ ಶೋಭಾ, ನಿಸರ್ಗ ಸಂಸ್ಥೆ ವ್ಯವಸ್ಥಾಪಕರು, ಪದಾಧಿಕಾರಿಗಳು, ಲಿಂಗತ್ವ ಅಲ್ಪಸಂಖ್ಯಾತರು ಪಾಲ್ಗೊಂಡಿದ್ದರು.

ಸಹಾಯವಾಣಿ 1800 599 2025 ಸಂಪರ್ಕಿಸಿ ಹೆಚ್ಚಿನ ಪ್ರಚಾರಕ್ಕಾಗಿ ಮಹಿಳಾ ಅಭಿವೃದ್ಧಿ ನಿಗಮದಿಂದ ಮಾಹಿತಿ ಶಿಕ್ಷಣ ಹಾಗೂ ಪೋಸ್ಟರ್ ಹೋರ್ಡಿಂಗ್ ತಯಾರಿಸಲಾಗಿದೆ. ಬಸ್ ಹಾಗೂ ರೈಲ್ವೆ ನಿಲ್ದಾಣ ಆಸ್ಪತ್ರೆ ಆವರಣ ಮಾರುಕಟ್ಟೆ ಪ್ರದೇಶ ಕಾಲೇಜು ಆವರಣ ತಾಲ್ಲೂಕು ಕಚೇರಿ ಸ್ಥಳಗಳಲ್ಲಿ ಇವುಗಳನ್ನು ಅಳವಡಿಸಲಾಗಿದೆ. ಸಮೀಕ್ಷೆ ಕುರಿತು ಮಾಹಿತಿಗೆ ಸಹಾಯವಾಣಿ 1800 599 2025 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.